ದೇಶದಲ್ಲಿ 2 ಕೋಟಿ ದಾಟಿದ ಸೋಂಕು ಪ್ರಕರಣ – ಕರ್ನಾಟಕ ಸೇರಿ 12 ರಾಜ್ಯಗಳಲ್ಲಿ ಅತಿ ಹೆಚ್ಚು ಸಕ್ರಿಯ ಕೇಸ್ ಗಳು ಪತ್ತೆ
ನವದೆಹಲಿ : ವಿಶ್ವದಲ್ಲೇ ಅತಿ ಹೆಚ್ಚು ಕೇಸ್ ಗಳು ಪತ್ತೆಯಾದ ದೇಶ ಅಮೆರಿಕಾ ಬಿಟ್ಟರೆ 2ನೇ ಸ್ಥಾನದಲ್ಲಿ ಭಾರತವಿದೆ. ಭಾರತದಲ್ಲಿ ಸುಮಾರು 2 ಕೋಟಿ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಇಷ್ಟು ಪ್ರಮಾಣದಲ್ಲಿ ಸೋಂಕಿತರ ಸಂಖ್ಯೆ ಪತ್ತೆಯಾದ ಜಗತ್ತಿನ ಎರಡನೇ ದೇಶ ಎಂಬ ಕುಖ್ಯಾತಿಗೆ ಪಾತ್ರವಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಸುಮಾರು 3,55,832 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಮಹಾಮಾರಿಗೆ ಒಂದೇ ದಿನ 3,502 ಮಂದಿ ಜೀವ ಕಳೆದುಕೊಂಡಿದ್ದಾರೆ.
ಇನ್ನೂ ದೇಶದ 12 ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಅಧಿಕ ಸಕ್ರಿಯ ಪ್ರಕರಣಗಳಿದ್ದು, ಅಂತಹ ರಾಜ್ಯಗಳ ಲಿಸ್ಟ್ ನಲ್ಲಿ ಕರ್ನಾಟಕವೂ ಒಂದಾಗಿದೆ. ಹರಿಯಾಣ , ಕರ್ನಾಟಕ , ಬಿಹಾರ , ತಮಿಳುನಾಡು , ರಾಜಸ್ಥಾನ , ಆಂಧ್ರಪ್ರದೇಶ, ಕೇರಳ, ಪಶ್ಚಿಮ ಬಂಗಾಳ ಸೇರಿ 12 ರಾಜ್ಯಗಳಲ್ಲಿ ದೈನಿಕ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.








