ಲಸಿಕೆ ಅಭಿಯಾನಕ್ಕೆ ಇದುವರೆಗೂ ಒಟ್ಟಾರೆಯಾಗಿ ಖರ್ಚಾಗಿರೋದೆಷ್ಟು ಗೊತ್ತಾ..?
ನವದೆಹಲಿ : ಕೊರೊನಾ 2ನೇ ಅಲೆ ದೇಶದ ಜನತೆಯನ್ನು ಇನ್ನಿಲ್ಲದಂತೆ ಕಾಡಿದೆ. ಈ ಅಲೆಯಲ್ಲಿ ಅಪಾರ ಪ್ರಮಾಣದ ಸಾವು-ನೋವು ಸಂಭವಿಸಿದ್ದು, ಇದರ ಜೊತೆಗೆ ಬ್ಲಾಕ್, ವೈಟ್ ಫಂಗಸ್ , ಯೆಲ್ಲೂ, ಹಸರು ಫಂಗಸ್ , ಡೆಲ್ಟಾ , ಲ್ಯಾಂಬ್ಡಾ , ಜಿಕಾ , ಕಪ್ಪಾ ವೈರಸ್ ಳ ಆಕಂತ ಜನರನ್ನ ಆತಂಕಕ್ಕೆ ಈಡು ಮಾಡಿದೆ.. ಈ ನಡುವೆ ಕೋವಿಡ್ 3ನೇ ಅಲೆ ಎಚ್ಚರಿಕೆ ನೀಡಲಾಗಿದ್ದು, ಇದರ ಪರಿನಾಮವೂ ಅಷ್ಟೇ ಭೀಕರವಾಗಿರಲಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಆಫ್ ಇಂಡಿಯಾ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ವಿಶ್ವಾದ್ಯಂತ ಕೊರೊನಾ ವೈರಸ್ , ರೂಪಾಂತರ ತಳಿಗಳ ಹಾವಳಿಯ ನಡುವೆ ಕೊರೊನಾ ಲಸಿಕೆ ಅಭಿಯಾನವೂ ಹೆಚ್ಚಾಗಿದೆ.. ಇಲ್ಲಿಯವರೆಗೂ ದೇಶದ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 43.9 ಕೋಟಿ ಲಸಿಕಾ ಡೋಸ್‌ಗಳನ್ನು ಪೂರೈಸಲಾಗಿದ್ದು, 71.4 ಲಕ್ಷ ಡೋಸ್‌ಗಳು ಸರಬರಾಜು ಹಂತದಲ್ಲಿವೆ. ಇನ್ನೂ ದೇಶದಲ್ಲಿ ಶುಕ್ರವಾರ 42.7 ಲಕ್ಷ ಡೋಸ್ ಗಳನ್ನು ನೀಡಲಾಗಿದೆ ಎಂದು ಕೇಂದ್ರ ಅಂಕಿ ಅಂಶಗಳನ್ನ ನೀಡಿದೆ. ಇನ್ನೂ ದೇಶದಲ್ಲಿ ಕೋವಿಡ್-19 ಲಸಿಕೆ ಖರೀದಿ, ಲಸಿಕೆ ನೀಡಿಕೆ ಕಾರ್ಯಾಚರಣೇ ವೆಚ್ಚ ಸೇರಿದಂತೆ ಲಸಿಕಾ ಅಭಿಯಾನಕ್ಕೆ 9,275 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿಗೆ ಶುಕ್ರವಾರ ಮಾಹಿತಿ ನೀಡಿದೆ.
ಮಕ್ಕಳಿಗೆ ಕೊರೊನಾ ಲಸಿಕೆ ಯಾವಾಗ..? ಉತ್ತರ ಕೊಟ್ಟ ಏಮ್ಸ್ ನಿರ್ದೇಶಕರು…!
ಲಸಿಕೆ ಡೋಸ್‌ಗಳ ಖರೀದಿಯಲ್ಲಿ ವಿಳಂಬವಾಗಿಲ್ಲ ಎಂದು ಸರ್ಕಾರ ಸಮರ್ಥಿಸಿಕೊಂಡಿದ್ದು, ಆಗಸ್ಟ್‌ನಿಂದ ಡಿಸೆಂಬರ್ ಅವಧಿಯಲ್ಲಿ ಒಟ್ಟು 135 ಕೋಟಿ ಲಸಿಕಾ ಡೋಸ್‌ಗಳನ್ನು ಖರೀದಿಸಲು ಉದ್ದೇಶಿಸಿದೆ ಎಂದು ಅರೋಗ್ಯ ಖಾತೆ ರಾಜ್ಯ ಸಚಿವ ಭಾರ್ತಿ ಪ್ರವೀಣ್ ಪವಾರ್ ಅವರು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಮತ್ತು ಟಿಎಂಸಿಯ ಮಾಲಾ ರಾಯ್ ಕೇಳಿದ ಪ್ರಶ್ನೆಗೆ ನೀಡಿದ ಉತ್ತರದಲ್ಲಿ ವಿವರಿಸಿದ್ದಾರೆ.
2021ರ ಆಗಸ್ಟ್‌ನಿಂದ ಡಿಸೆಂಬರ್ ಅವಧಿಯಲ್ಲಿ ಒಟ್ಟು 135 ಕೋಟಿ ಡೋಸ್‌ಗಳು ಲಭ್ಯವಾಗುವ ನಿರೀಕ್ಷೆ ಇದೆ. ದೇಶೀಯ ಲಸಿಕೆ ಉತ್ಪಾದನಾ ಕಂಪನಿಗಳ ಜತೆ ಖರೀದಿ ಒಪ್ಪಂದ ಮಾಡಿಕೊಳ್ಳುವಲ್ಲಿ ಯಾವುದೇ ವಿಳಂಬವಾಗಿಲ್ಲ. ಪೂರೈಕೆ ಕಾರ್ಯಾದೇಶ ನೀಡುವ ವೇಳೆಗೆ ಮುಂಗಡ ಪಾವತಿಯನ್ನೂ ಮಾಡಲಾಗಿದೆ. ಲಸಿಕೆ ಅಭಿಯಾನ ಪೂರ್ಣಗೊಳಿಸಲು ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚೀನಾದಿಂದ ಇಡೀ ವಿಶ್ವಕ್ಕೆ ಹರಡಿರುವ ಕೊರೊನಾ ಮಹಾಮಾರಿಯ ಅಟ್ಟಹಾಸಕ್ಕೆ 2 ವರ್ಷಗಳಿಂದ ಜಗತ್ತಿನ ಜನರು ಕಷ್ಟ ಪಡ್ತಿದ್ದಾರೆ.. ಲಾಕ್ ಡೌನ್ , ಕ್ವಾರಂಟೈನ್ ನಿಂದಾಗಿ ಜನರು ಮಾನಸಿಕ ಖಿನ್ನತೆಗೂ ಒಳಗಾಗ್ತಿದ್ದಾರೆ.. ಮತ್ತೊಂದೆಡೆ ಕೆಲಸಗಳಿಲ್ಲದೆ ಅದೆಷ್ಟೋ ಕುಟುಂಬಗಳು ಪರದಾಡಿವೆ.. ಇನ್ನೂ ಕಡುಬಡವರು ಒಂದು ಹೊತ್ತಿನ ಊಟಕ್ಕೂ ಪರಿತಪಿಸಿದ್ದಾರೆ… ಕೂಲಿ ಕಾರ್ಮಿಕರು ಕಷ್ಟ ಪಟ್ಟಿದ್ದಾರೆ.. ಇದೇ ಪರಿಸ್ಥಿತಿ ಬಾರತದಲ್ಲೂ ಇದೆ..
ಕೊರೊನಾ ರಿಪೋರ್ಟ್ : 39,097 ಮಂದಿಗೆ ಸೋಂಕು
ಅದ್ರಲ್ಲೂ ಇಡೀ ವಿಶ್ವಾದ್ಯಂತ ಕೊರೊನಾ 2ನೇ ಹಾವಳಿ ಸಾಕಷ್ಟು ಅವಾಂತರ ಸೃಷ್ಟಿಸಿದೆ… ಕೋಟ್ಯಾಂತರ ಜನರ ಬದುಕು ಮೂರಾಬಟ್ಟೆಯಾಗಿದೆ… ಸಾವಿರಾರು ಮಕ್ಕಳು ತಂದೆ ಅಥವ ತಾಯ ಇಲ್ಲಾ ಇಬ್ಬರನ್ನೂ ಕಳೆದುಕೊಂಡಿದ್ದಾರೆ. ಲಕ್ಷಾಂತರ ಜನರು ಜೀವನ ಕಳೆದುಕೊಂಡಿದ್ದಾರೆ.. ಆಪ್ತರನ್ನ , ಸ್ನೇಹಿತರು , ಕುಟುಂಬದವರನ್ನ ಕಳೆದುಕೊಂಡು ಜನರು ಕೊರೊನಾ ಮಹಾಮಾರಿ ಹಾಗೂ ಅದರ ಜನ್ಮಸ್ಥಳ ಚೈನಾಗೆ ಹಿಡಿ ಶಾಪ ಹಾಕ್ತಿದ್ದಾರೆ..
ಟಿಸಿಎಸ್ – 200 ಕ್ಕೂ ಹೆಚ್ಚು ಉದ್ಯೋಗಿಗಳನ್ನು ನೇಮಕಾತಿ ಮಾಡಿಕೊಳ್ಳಲು ನಿರ್ಧಾರ
ಕೊರೊನ ಮಹಾಮಾರಿ:
ಕೊರೊನ ವೈರಸ್ ಹರಡಲು ಬೇಕಾಗಿರುವುದು ನಮ್ಮ ಸಹಾಯ ಆದರೆ ಹರಡದಂತೆ ಮಾಡಬೇಕಾಗಿರುದು ನಮ್ಮ ಸಹಕಾರ”.
ತಪ್ಪದೇ ಹೊರಗೆ ಹೋದಾಗ ಸ್ವಚ್ಛವಾದ ಮಾಸ್ಕ ಧರಿಸಿ.
ಸಾರ್ವಜನಿಕ ಸ್ಥಳಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಿ .
ಜನ ನಿಬಿಡ ಪ್ರದೇಶದಿಂದ ದೂರವಿರಿ.
ಮನೆ ಸಮೀಪದ ಅಂಗಡಿಯಲ್ಲಿ ಫೋನ್ ಮೂಲಕ ತಮಗೆ ಬೇಕಾದ ದಿನಸಿ ಮತ್ತು ಇತರ ವಸ್ತುಗಳನ್ನು ಪಟ್ಟಿ ಮಾಡಿ ನಿರ್ದಿಷ್ಟ ಸಮಯ ಗೊತ್ತು ಮಾಡಿ.
ನಿಮ್ಮ ಮನೆಗೆ ನೀವೇ ಲಕ್ಷ್ಮಣ ರೇಖೆ ಸೃಷ್ಟಿ ಮಾಡಿ.
ಅನಗತ್ಯ ಓಡಾಟ ಸಲ್ಲದು. ಹೊರಗಡೆ ಹೋಗಿ ಬಂದ ಮೇಲೆ ಬಟ್ಟೆ ಬದಲಾಯಿಸಿ ಸ್ನಾನ ಮಾಡಿ.
ನಮ್ಮ ಹೋರಾಟ ಕೊರೊನ ನಿರ್ಮೂಲನೆಯತ್ತ.
ಇದು ಸಾಕ್ಷ ಟಿವಿಯ ಕಳಕಳಿಯ ವಿನಂತಿ.








