ಭಾರತ ಇಂಗ್ಲೆಂರಡ್ ಎಡನೇ ಏಕದಿನ ಪಂದ್ಯ- ಸೂರ್ಯಕುಮಾರ್ ಗೆ ಸಿಗುತ್ತಾ ಸ್ಥಾನ..?
india england 2nd one day match Who will win the second ODI
ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಇಂದು ಪುಣೆಯಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಏಕದಿನ ಪಂದ್ಯವನ್ನು ಗೆದ್ದುಕೊಂಡಿರುವ ಟೀಮ್ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ. ಮತ್ತೊಂದೆಡೆ ಇಂಗ್ಲೆಂಡ್ ತಂಡ ಸರಣಿಯನ್ನು ಜೀವಂತವಾಗಿರಿಸಿಕೊಳ್ಳಲು ಹೋರಾಟ ನಡೆಸಲಿದೆ.
ಇನ್ನು ಈ ಪಂದ್ಯಕ್ಕೆ ಟೀಮ್ ಇಂಡಿಯಾಗೆ ಯಾವುದೇ ತಲೆನೋವಿಲ್ಲ. ಆತ್ಮವಿಶ್ವಾಸದಿಂದ ಬೀಗುತ್ತಿರುವ ಯುವ ಕ್ರಿಕೆಟಿಗರ ಅಬ್ಬರ ತಂಡದ ಹಿರಿಯ ಆಟಗಾರರ ಮೇಲಿನ ಒತ್ತಡವನ್ನು ಕಡಿಮೆ ಮಾಡಿದೆ. ಹಾಗೇ ಎದುರಾಳಿ ಇಂಗ್ಲೆಂಡ್ ತಂಡದ ಗೇಮ್ ಪ್ಲಾನ್ ಗಳನ್ನೆಲ್ಲಾ ಉಲ್ಟಾಪಲ್ಟಾ ಮಾಡುತ್ತಿದೆ.
ಆರಂಭಿಕರಾಗಿ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಉತ್ತಮ ಲಯದಲ್ಲಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡ ಬ್ಯಾಟಿಂಗ್ ಲಯವನ್ನು ಕಂಡುಕೊಂಡಿದ್ದಾರೆ. ಆದ್ರೆ ಈ ಪಂದ್ಯಕ್ಕೆ ಶ್ರೇಯಸ್ ಅಯ್ಯರ್ ಬದಲು ಸೂರ್ಯಕುಮಾರ್ ಯಾದವ್ ಆಡುವ ಸಾಧ್ಯತೆಗಳಿವೆ.
ಟಿ-ಟ್ವೆಂಟಿ ಪಂದ್ಯದಲ್ಲಿ ಗಮನ ಸೆಳೆದಿರುವ ಸೂರ್ಯಕುಮಾರ್ ಯಾದವ್ ಚೊಚ್ಚಲ ಏಕದಿನ ಪಂದ್ಯವನ್ನಾಡುವ ಸಾಧ್ಯತೆಗಳು ದಟ್ಟವಾಗಿದೆ. ಹಾಗೇ ಕೆ.ಎಲ್. ರಾಹುಲ್ ಬ್ಯಾಟಿಂಗ್ ಜೊತೆ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿಭಾಯಿಸಲಿದ್ದಾರೆ. ಟಿ-ಟ್ವೆಂಟಿಯಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರಾಹುಲ್ ಮತ್ತೆ ಫಾರ್ಮ್ ಗೆ ಬಂದಿದ್ದಾರೆ.
ಇನ್ನೊಂದೆಡೆ ಪಾಂಡ್ಯ ಬ್ರದರ್ಸ್ ತಮ್ಮ ಸ್ಫೋಟಕ ಆಲ್ ರೌಂಡ್ ಆಟದಿಂದ ಗಮನ ಸೆಳೆಯುತ್ತಿದ್ದಾರೆ. ಬೌಲಿಂಗ್ ಜೊತೆಗೆ ಟೀಮ್ ಇಂಡಿಯಾದ ಕೆಳ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗುತ್ತಿದ್ದಾರೆ.
ಮತ್ತೊಂದೆಡೆ ಕರ್ನಾಟಕದ ಯುವ ವೇಗಿ ಪ್ರಸಿದ್ಧ್ ಕೃಷ್ಣ ಕೂಡ ಸಿಕ್ಕ ಅವಕಾಶವನ್ನು ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ. ಭುವನೇಶ್ವರ್ ಕುಮಾರ್ ಸಹ ಬೌಲಿಂಗ್ ಲಯ ಕಂಡುಕೊಂಡಿದ್ದಾರೆ.
ಇನ್ನೊಂದೆಡೆ ಇಂಗ್ಲೆಂಡ್ ತಂಡ ಸಂಘಟಿತ ಆಟವನ್ನಾಡಲು ಟೀಮ್ ಇಂಡಿಯಾ ಬಿಡುತ್ತಿಲ್ಲ. ತಂಡದಲ್ಲಿ ಅಪ್ರತಿಮ ಆಟಗಾರರು ಇದ್ರೂ ಭಾರತದ ನೆಲದಲ್ಲಿ ಗೆಲುವು ದಕ್ಕಿಸಿಕೊಳ್ಳಲು ಒದ್ದಾಟ ನಡೆಸುತ್ತಿದೆ. ಅಲ್ಲದೆ ನಾಯಕ ಇಯಾನ್ ಮೊರ್ಗಾನ್ ಕೂಡ ಇನ್ನುಳಿದ ಎರಡು ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದು ಇಂಗ್ಲೆಂಡ್ ತಂಡದ ಚಿಂತೆಗೆ ಕಾರಣವಾಗಿದೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯ ಸಾಕಷ್ಟು ಕುತೂಹಲ ಮೂಡಿಸಿದೆ.
#india #england #suryakumaryadav #viratkohli #saakshatv #cricket #rohith sharma #shikhardhavan