ಹಲವು ದಾಖಲೆಗಳಿಗೆ ಸಾಕ್ಷಿಯಾಗಲಿದೆ 3ನೇ ಟೆಸ್ಟ್ ಪಂದ್ಯ
ಲೀಡ್ಸ್ : ಬರೋಬ್ಬರಿ 19 ವರ್ಷಗಳ ಬಳಿಕ ಟೀಂ ಇಂಡಿಯಾ ಹೆಡಿಂಗ್ಲೆ ಮೈದಾನದಲ್ಲಿ ಇಂಗ್ಲೆಂಡ್ ವಿರುದ್ಧ ಸೆಣಸಾಡಲಿದೆ. ಈ ಪಂದ್ಯದಲ್ಲಿ ಹಲವು ದಾಖಲೆಗಳು ಸೃಷ್ಠಿಯಾಗುವ ಸಾಧ್ಯತೆಗಳಿವೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಪಂದ್ಯದಲ್ಲಿ ಟೀಂ ಇಂಡಿಯಾದ ವಿರಾಟ್ ಕೊಹ್ಲಿ, ವಿಕೆಟ್ ಕೀಪರ್ ರಿಷಭ್ ಪಂತ್ ಮತ್ತು ವೇಗಿ ಬುಮ್ರಾ ವಿಶೇಷ ಮೈಲಿಗಲ್ಲುಗಳನ್ನು ಸೃಷ್ಟಿಸಲಿದ್ದಾರೆ.
ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೂರನೇ ಪಂದ್ಯದಲ್ಲಿ 63 ರನ್ ಗಳನ್ನು ಗಳಿಸಿದ್ರೆ, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 23,000 ರನ್ ಪೂರ್ಣಗೊಳಿಸಿದ ಸಾಧನೆ ಮಾಡಲಿದ್ದಾರೆ.
ಸದ್ಯ ವಿರಾಟ್ 437 ಅಂತಾರಾಷ್ಟ್ರೀಯ ಪಂದ್ಯಗಳಿಂದ 22, 937 ರನ್ ಗಳಿಸಿದ್ದಾರೆ. ಮೂರನೇ ಪಂದ್ಯದಲ್ಲಿ ವಿರಾಟ್ 63 ರನ್ ಗಳಿಸುವಲ್ಲಿ ಸಫಲವಾದರೆ, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ 23 ಸಾವಿರ ರನ್ ಸಾಧನೆ ಮಾಡಿ ಭಾರತದ 3ನೇ ಹಾಗೂ ವಿಶ್ವದ 7ನೇ ಬ್ಯಾಟ್ಸ್ ಮನ್ ಎನಿಸಿಕೊಳ್ಳಲಿದ್ದಾರೆ.
ಇನ್ನು ಯಂಗ್ ಸ್ಟಾರ್ ರಿಷಭ್ ಪಂತ್ ಮುಂದಿನ ಟೆಸ್ಟ್ ಪಂದ್ಯದಲ್ಲಿ 2 ಸಿಕ್ಸರ್ ಬಾರಿಸಿದ್ರೆ ಕ್ಯಾಲೆಂಡರ್ ವರ್ಷದಲ್ಲಿ ಗರಿಷ್ಠ ಸಿಕ್ಸರ್ ಸಿಡಿಸಿದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಎಂಬ ಹೆಗ್ಗಳಿಕೆ ಪಾತ್ರರಾಗಲಿದ್ದಾರೆ. 2018ರಲ್ಲಿ 16 ಸಿಕ್ಸರ್ ಸಿಡಿಸುವ ಮೂಲಕ ಧೋನಿ ಈ ಸಾಧನೆ ಮಾಡಿದ್ದರು.
ಇತ್ತ ಯಾರ್ಕರ್ ಕಿಂಗ್ ಜಸ್ಪ್ರೀತ್ ಬುಮ್ರಾ 3ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಪಡೆದರೆ ವೇಗವಾಗಿ 100 ವಿಕೆಟ್ ಪಡೆದ ಭಾರತ ವೇಗದ ಬೌಲರ್ ದಾಖಲೆ ಎಂಬ ದಾಖಲೆಯನ್ನು ಸೃಷ್ಟಿಸಲಿದ್ದಾರೆ.









