ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡ್ತಾರಾ ಕೆ..ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್..?

1 min read
k.l. rahul mayank agarwal saakshatv

ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಆಡ್ತಾರಾ ಕೆ..ಎಲ್.ರಾಹುಲ್ ಮತ್ತು ಮಯಾಂಕ್ ಅಗರ್ ವಾಲ್..?

axar patel team india saakshatvಟೀಮ್ ಇಂಡಿಯಾ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಮಾರ್ಚ್ 4ರಿಂದ ಆರಂಭವಾಗಲಿದೆ.
ಈಗಾಗಲೇ ನಾಲ್ಕು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾ 2-1ರಿಂದ ಮುನ್ನಡೆಯಲ್ಲಿದೆ. ಮೊದಲ ಟೆಸ್ಟ್ ಪಂದ್ಯವನ್ನು ಸೋತ ಬಳಿಕ ವಿರಾಟ್ ಪಡೆ ಸತತ ಎರಡು ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡು ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಭಾಗವಹಿಸುವ ಅರ್ಹತೆ ಪಡೆದುಕೊಳ್ಳುವ ಸನೀಹದಲ್ಲಿದೆ.
ಹೀಗಾಗಿ ನಾಲ್ಕನೇ ಟೆಸ್ಟ್ ಪಂದ್ಯ ಟೀಮ್ ಇಂಡಿಯಾಗೆ ಹೆಚ್ಚಿನ ಮಹತ್ವದ್ದಾಗಿದೆ. ಯಾವುದೇ ಕಾರಣಕ್ಕೂ ನಾಲ್ಕನೇ ಟೆಸ್ಟ್ ಪಂದ್ಯವನ್ನು ಟೀಮ್ ಇಂಡಿಯಾ ಸೋಲಲೇಬಾರದು. ಒಂದೋ ಗೆಲ್ಲಬೇಕು, ಇಲ್ಲ ಅಂದ್ರೆ ಡ್ರಾನಾದ್ರೂ ಮಾಡಿಕೊಳ್ಳಬೇಕು. ಒಂದು ವೇಳೆ ಸೋತ್ರೂ ಕಷ್ಟವಾಗುತ್ತೆ.
ಈ ನಡುವೆ ಪ್ರವಾಸಿ ಇಂಗ್ಲೆಂಡ್ ತಂಡ ಮೂರನೇ ಟೆಸ್ಟ್ ಪಂದ್ಯದಲ್ಲಿ ಸೋತ ಕಾರಣ ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ರೇಸ್ ನಲ್ಲಿಲ್ಲ.
ಇದೀಗ ಟೀಮ್ ಇಂಡಿಯಾ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಭರದಿಂದ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಟೀಮ್ ಇಂಡಿಯಾ ಆಟಗಾರರು ಗೆಲುವಿನ ಉನ್ಮಾದಲ್ಲಿದ್ರೂ ಕಠಿಣ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ನೆಟ್ಸ್ ನಲ್ಲಿ ಟೀಮ್ ಇಂಡಿಯಾ ಆಟಗಾರರು ಬೆವರಿಳಿಸುತ್ತಿದ್ದಾರೆ.
k.l. rahul mayank agarwal saakshatvಇನ್ನೊಂದೆಡೆ, ಮೂರನೇ ಟೆಸ್ಟ್ ಪಂದ್ಯ ಕೇವಲ ಎರಡು ದಿನಗಳಲ್ಲಿ ಮುಗಿದಿರುವುದರಿಂದ ಆಟಗಾರರಿಗೆ ಸ್ವಲ್ಪ ಜಾಸ್ತಿನೇ ವಿಶ್ರಾಂತಿ ಸಿಕ್ಕಿದೆ. ಈ ಸಮಯದಲ್ಲಿ ಟೀಮ್ ಇಂಡಿಯಾ ಆಟಗಾರರು ಡಿನ್ನರ್ ಪಾರ್ಟಿ ಕೂಡ ಮಾಡಿಕೊಂಡಿದ್ದಾರೆ.
ಅಂದ ಹಾಗೇ ನಾಲ್ಕನೇ ಟೆಸ್ಟ್ ಪಂದ್ಯಕ್ಕೆ ಜಸ್ಪ್ರಿತ್ ಬೂಮ್ರಾ ವಿಶ್ರಾಂತಿ ಪಡೆದುಕೊಂಡಿದ್ದಾರೆ. ಬೂಮ್ರಾ ಜಾಗದಲ್ಲಿ ಉಮೇಶ್ ಯಾದವ್ ಆಡುವ ಸಾಧ್ಯತೆ ಇದೆ. ಇನ್ನುಳಿದಂತೆ ತಂಡದಲ್ಲಿ ಬದಲಾವಣೆಯಾಗುವ ಸಾಧ್ಯತೆಗಳು ತೀರಾ ಕಮ್ಮಿ.
ಒಂದು ವೇಳೆ ಬದಲಾವಣೆ ಮಾಡಿಕೊಳ್ಳಲೇಬೇಕಾದ್ರೆ, ಶುಬ್ಮನ್ ಗಿಲ್, ಚೇತೇಶ್ವರ ಪೂಜರಾಗೆ ವಿಶ್ರಾಂತಿ ನೀಡಬಹುದು. ಹಾಗಿದ್ದಾಗ ಮಯಾಂಕ್ ಅಗರ್ ವಾಲ್ ಮತ್ತು ಕೆ.ಎಲ್. ರಾಹುಲ್ ತಂಡದ 11ರ ಬಳಗದಲ್ಲಿ ಸ್ಥಾನ ಪಡೆದುಕೊಳ್ಳಬಹುದು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd