ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ T20 ಸರಣಿಯ ಮೊದಲ ಪಂದ್ಯವು ಇಂದು ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ನಡೆಯಲಿದೆ. ಸೂರ್ಯ ಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂಇಂಡಿಯಾ ಸಿದ್ಧವಾಗಿದ್ದು, ಎಲ್ಲರ ಕಣ್ಣುಗಳು ಸ್ಟಾರ್ ವೇಗಿ ಮೊಹಮ್ಮದ್ ಶಮಿಯತ್ತ ನೆಟ್ಟಿವೆ. ಗಾಯದಿಂದ ಚೇತರಿಸಿಕೊಂಡು ಈಗಾಗಲೇ ತಂಡವನ್ನು ಸೇರಿಕೊಂಡಿರುವ ಶಮಿ ನಿರೀಕ್ಷೆಯಂತೆ ಪ್ರದರ್ಶನ ನೀಡಿದರೆ CT-2025ರಲ್ಲಿ ಭಾರತಕ್ಕೆ ಎಕ್ಸ್‌ಫ್ಯಾಕ್ಟರ್ ಆಗಿ ಕಾರ್ಯನಿರ್ವಹಿಸುವುದು ಪಕ್ಕಾ ಎನ್ನಲಾಗಿದೆ, ಅತ್ತ ಕಡೆ ಗೆಲುವಿನೊಂದಿಗೆ ಸರಣಿ ಆರಂಭಿಸಲು ಇಂಗ್ಲೆಂಡ್ ಸಹ ಮುಂದಾಗಿದೆ. ಪಂದ್ಯ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ
ಇಂಗ್ಲೆಂಡ್ ವಿರುದ್ಧದ ಮೊದಲ ಟಿ20ಐ ಭಾರತದ ಸಂಭಾವ್ಯ ತಂಡ
ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಬೆಂಚ್: ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯ್.
ಇಂಗ್ಲೆಂಡ್ ಅಂತಿಮ ತಂಡ: ಬೆನ್ ಡಕೆಟ್, ಫಿಲ್ ಸಾಲ್ಟ್ (ವಿಕೆಟ್ ಕೀಪರ್), ಜೋಸ್ ಬಟ್ಲರ್ (ನಾಯಕ), ಹ್ಯಾರಿ ಬ್ರೂಕ್ (ಉಪನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಜೇಮೀ ಓವರ್ಟನ್, ಜೋಫ್ರಾ ಆರ್ಚರ್, ಗಸ್ ಅಟ್ಕಿನ್ಸನ್, ಆದಿಲ್ ರಶೀದ್, ಮಾರ್ಕ್ ವುಡ್.








