ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಸೂರ್ಯಕುಮಾರ್, ಪೃಥ್ವಿ ಶಾ ಆಯ್ಕೆ..!

1 min read
surya kumar yadav prithvi shaw team india saakshatv

ಟೀಮ್ ಇಂಡಿಯಾ ಟೆಸ್ಟ್ ತಂಡಕ್ಕೆ ಸೂರ್ಯಕುಮಾರ್, ಪೃಥ್ವಿ ಶಾ ಆಯ್ಕೆ..!

surya kumar yadav saakshatv team indiaಟೀಮ್ ಇಂಡಿಯಾದ ಆರಂಭಿಕ ಆಟಗಾರ ಪೃಥ್ವಿ ಶಾ ಮತ್ತು ಮಧ್ಯಮ ಕ್ರಮಾಂಕದ ಭರವಸೆಯ ಬ್ಯಾಟ್ಸ್ ಮೆನ್ ಸೂರ್ಯ ಕುಮಾರ್ ಯಾದವ್ ಅವರು ಇಂಗ್ಲೆಂಡ್ ಟೆಸ್ಟ್ ಸರಣಿಗೆ ಆಯ್ಕೆಯಾಗಿದ್ದಾರೆ.
ಇಂಗ್ಲೆಂಡ್ ವಿರುದ್ಧದ ಐದು ಟೆಸ್ಟ್ ಪಂದ್ಯಗಳ ಮೊದಲ ಪಂದ್ಯ ಆಗಸ್ಟ್ 4ರಿಂದ ಆರಂಭವಾಗಲಿದೆ.
ಈ ನಡುವೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಮುನ್ನವೇ ಟೀಮ್ ಇಂಡಿಯಾದ ಮೂವರು ಆಟಗಾರರು ಗಾಯಕ್ಕೆ ತುತ್ತಾಗಿ ಸರಣಿಯಿಂದಲೇ ಹೊರಬಿದ್ದಿದ್ದಾರೆ, ಆರಂಭಿಕ ಶುಬ್ಮನ್ ಗಿಲ್ ಬದಲು ಪಶ್ಚಿಮ ಬಂಗಾಳದ ಅಭಿಮನ್ಯು ಈಶ್ವರನ್ ಟೀಮ್ ಇಂಡಿಯಾವನ್ನು ಸೇರಿಕೊಂಡಿದ್ದರು. ಹಾಗೇ ಅಭ್ಯಾಸ ಪಂದ್ಯದ ವೇಳೆ ವೇಗಿ ಆವೇಶ್ ಖಾನ್ ಮತ್ತು ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ಅವರು ಕೈ ಬೆರಳಿಗೆ ಗಾಯ ಮಾಡಿಕೊಂಡಿದ್ದರು. ಹೀಗಾಗಿ ಇವರಿಬ್ಬರು ಕೂಡ ಸರಣಿಯಿಂದ ಹೊರನಡೆದಿದ್ದಾರೆ. ಅಲ್ಲದೆ ಇವರಿಬ್ಬರ ಬದಲಿಗೆ ಪೃಥ್ವಿ ಶಾ ಮತ್ತು ಸೂರ್ಯ ಕುಮಾರ್ ಯಾದವ್ ಅವರು ವಿರಾಟ್ ಬಳಗಕ್ಕೆ ಸೇರ್ಪಡೆಯಾಗಲಿದ್ದಾರೆ.
prithvi shaw saakshatv team india ಇನ್ನು ದೇವದತ್ ಪಡಿಕ್ಕಲ್ ಅವರಿಗೆ ಅವಕಾಶವನ್ನು ನೀಡಲಾಗಿಲ್ಲ. ಟೆಸ್ಟ್ ಕ್ರಿಕೆಟ್ ಗೆ ಎಂಟ್ರಿಯಾಗಲು ದೇವದತ್ ಪಡಿಕ್ಕಲ್ ಕನಿಷ್ಠ ಇನ್ನೂ ಒಂದು ವರ್ಷ ಕಾಯಲೇಬೇಕಿದೆ.

ಟೀಮ್ ಇಂಡಿಯಾದ ಟೆಸ್ಟ್ ತಂಡ
ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯಾ ರಹಾನೆ (ಉಪನಾಯಕ), ರೋಹಿತ್ ಶರ್ಮಾ, ಮಯಾಂಕ್ ಅಗರ್ ವಾಲ್, ಚೇತೇಶ್ವರ ಪೂಜಾರ, ಹನುಮ ವಿಹಾರಿ, ರಿಷಬ್ ಪಂತ್, ಆರ್. ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರಿತ್ ಬೂಮ್ರಾ, ಇಶಾಂತ್ ಶರ್ಮಾ, ಮಹಮ್ಮದ್ ಶಮಿ, ಮಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್, ಉಮೇಶ್ ಯಾದವ್, ಕೆ. ಎಲ್. ರಾಹುಲ್, ವೃದ್ದಿಮಾನ್ ಸಾಹಾ, ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯ ಕುಮಾರ್ ಯಾದವ್.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd