ನವದೆಹಲಿ : ಕೊರೊನಾ ವಿರುದ್ದದ ಹೋರಾಟದಲ್ಲಿ ಬೇರೆ ದೇಶಗಳಿಗೆ ಹೋಲಿಸಿದರೇ ನಮ್ಮ ದೇಶ ಉತ್ತಮವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ರೆವೆರೆಂಡ್ ಡಾ.ಜೋಸೆಫ್ ಮರ್ ಥೊಮಾ ರವರ 90 ನೇ ಜನ್ಮ ದಿನಾಚರಣೆಯ ಕಾರ್ಯಕ್ರಮವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟನೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನೆರೆವೆರಿಸಿದರು.
ಈ ವೇಳೆ ಮಾತನಾಡಿದ ಪಿಎಂ ನರೇಂದ್ರ ಮೋದಿ, ದೇಶದಲ್ಲಿ ಕೊರೊನಾ ಸೋಂಕಿತರ ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗಿದೆ. ಕೊರೊನಾ ವಿರುದ್ದದ ಹೋರಾಟದಲ್ಲಿ ಬೇರೆ ದೇಶಗಳಿಗೆ ಹೋಲಿಸಿದರೇ ನಮ್ಮ ದೇಶ ಉತ್ತಮವಾಗಿದೆ. ಕೊರೊನೊ ಸಂಕಷ್ಟದಿಂದ ದೇಶದ ಪರಿಸ್ಥಿತಿ ಗಂಭೀರವಾಗಿರುತ್ತದೆ ಎಂದು ಭಾವಿಸಿದ್ದರು. ಆದರೆ ಲಾಕ್ ಡೌನ್ ಸರ್ಕಾರ ತೆಗೆದುಕೊಂಡ ಕ್ರಮಗಳು ಜೊತೆಗೆ ಜನರ ಸಹಕಾರದಿಂದ ಭಾರತ ಉತ್ತಮ ಸ್ಥಿತಿಯಲ್ಲಿದೆ.
ಇದೆ ವೇಳೆ ಸರ್ಕಾರದ ಸಾಧನೆಯ ಬಗ್ಗೆ ಮಾತನಾಡಿದ ಮೋದಿ ದೇಶದಲ್ಲಿ 8 ಕೋಟಿ ಕುಟುಂಬಗಳು ಉಚಿತ ಅಡುಗೆ ಅನಿಲದ ಸಂಪರ್ಕ ಪಡೆದಿದ್ದಾರೆ. ಮನೆಯಿಲ್ಲದವರಿಗೆ 1.5 ಕೋಟಿ ಮನೆಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ವಿಶ್ವದ ಅತಿ ದೊಡ್ಡ ಆರೋಗ್ಯ ಯೋಜನೆ ಆಯುಷ್ಮಾನ್ ಭಾರತ್ , ಮೂಲಕ ದೇಶದ ಜನರಿಗೆ ಆರೋಗ್ಯ ಸೇವೆ ಸಲ್ಲಿಸಲಾಗುತ್ತಿದೆ ಎಂದು ಪಿ,ಎಂ ನರೇಂದ್ರ ಮೋದಿ ಹೇಳಿದ್ದಾರೆ