ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾನೇ ಅಗ್ರಮಾನ್ಯ..!

1 min read
team india saakshatv

ವಿಶ್ವ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾನೇ ಅಗ್ರಮಾನ್ಯ..! 

team india saakshatvಟೆಸ್ಟ್ ಕ್ರಿಕೆಟ್ ನಲ್ಲಿ ಟೀಮ್ ಇಂಡಿಯಾ ಸದ್ಯ ವಿಶ್ವದ ಅಗ್ರಮಾನ್ಯ ತಂಡವಾಗಿದೆ. ದಶಕಗಳ ಹಿಂದೆ ಆಸ್ಟ್ರೇಲಿಯಾ ತಂಡ ವಿಶ್ವ ಕ್ರಿಕೆಟ್ ನಲ್ಲಿ ಸೌರ್ವಭೌಮವನ್ನು ಪ್ರದರ್ಶಿಸಿತ್ತು. ಇದೀಗ ಅದೇ ಹಾದಿಯಲ್ಲಿ ಟೀಮ್ ಇಂಡಿಯಾ ಮುನ್ನಡೆಯುತ್ತಿದೆ,
ಅದ್ರಲ್ಲೂ ವಿರಾಟ್ ಕೊಹ್ಲಿ ಸಾರಥ್ಯದ ಟೀಮ್ ಇಂಡಿಯಾ ಗೆಲುವಿನ ಅಭಿಯಾನದಲ್ಲಿ ಮುಂದುವರಿಯುತ್ತಿದೆ. ಇದಕ್ಕೆ ಪೂರಕವಾದ ಅಂಕಿ ಅಂಶಗಳು ಕೂಡ ಇವೆ.
ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ನಲ್ಲಿ ಟೀಮ್ ಇಂಡಿಯಾ ಅರ್ಹವಾಗಿಯೇ ಫೈನಲ್ ತಲುಪಿದೆ. ಜೂನ್ 18ರಿಂದ ಸೌತಾಂಪ್ಟನ್ ನಲ್ಲಿ ನಡೆಯಲಿರುವ ಫೈನಲ್ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಕಾದಾಟ ನಡೆಸಲಿದೆ. India is the best cricket team
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್‍ಷಿಪ್ ನಲ್ಲಿ ಟೀಮ್ ಇಂಡಿಯಾ ಐದು ಸರಣಿಗಳನ್ನು ಗೆದ್ದುಕೊಂಡಿದೆ. ಅಲ್ಲದೆ ಟೆಸ್ಟ್ ಚಾಂಪಿಯನ್‍ಷಿಪ್ ನಲ್ಲಿ 12 ಪಂದ್ಯಗಳಲ್ಲಿ ಜಯ ಸಾಧಿಸಿದೆ.
ಇನ್ನೊಂದೆಡೆ 2015ರ ನಂತರ ಟೀಮ್ ಇಂಡಿಯಾ ತವರಿನಲ್ಲಿ 25 ಟೆಸ್ಟ್ ಪಂದ್ಯಗಳನ್ನು ಗೆದ್ದುಕೊಂಡ್ರೆ, ವಿದೇಶಿ ನೆಲದಲ್ಲಿ 15 ಟೆಸ್ಟ್ ಪಂದ್ಯಗಳಲ್ಲಿ ಜಯ ಸಾಧಿಸಿದೆ.
team india saakshatvಈ ನಡುವೆ, ನಾಯಕ ವಿರಾಟ್ ಕೊಹ್ಲಿ ತವರಿನಲ್ಲಿ ಸತತ ಹತ್ತು ಟೆಸ್ಟ್ ಸರಣಿಗಳನ್ನು ಗೆದ್ದ ಹಿರಿಮೆಗೂ ಪಾತ್ರರಾಗಿದ್ದಾರೆ. ಅಲ್ಲದೆ ನಾಯಕನಾಗಿ ಟೀಮ್ ಇಂಡಿಯಾದ ಪರ ಗರಿಷ್ಠ ಪಂದ್ಯಗಳನ್ನು ಗೆದ್ದ ದಾಖಲೆಯೂ ವಿರಾಟ್ ಹೆಸರಿನಲ್ಲಿದೆ. ಸದ್ಯ ವಿಶ್ವ ಕ್ರಿಕೆಟ್ ನಲ್ಲಿ ನಾಯಕನಾಗಿ ಗರಿಷ್ಠ ಪಂದ್ಯಗಳನ್ನು ಗೆದ್ದಿರುವ ಸಾಲಿನಲ್ಲಿ ಮೂರನೇಯವರಾಗಿದ್ದಾರೆ. ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಗ್ರೇಮ್ ಸ್ಮಿತ್ ಮತ್ತು ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ನಂತರ ವಿರಾಟ್ ಕೊಹ್ಲಿ ಇದ್ದಾರೆ.
ಒಟ್ಟಿನಲ್ಲಿ ಟೀಮ್ ಇಂಡಿಯಾ ಸಾಂಪ್ರದಾಯಿಕ ಟೆಸ್ಟ್ ಕ್ರಿಕೆಟ್ ನಲ್ಲಿ ಪಾರುಪತ್ಯ ಸ್ಥಾಪಿಸಿದೆ. ಇದೀಗ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆದ್ದು ಹೊಸ ಇತಿಹಾಸ ಬರೆಯಲು ಕೊಹ್ಲಿ ಹುಡುಗರು ಕಾತರದಿಂದ ಕಾಯುತ್ತಿದ್ದಾರೆ.

India is the best cricket team

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd