ಕಳೆದ 24 ಗಂಟೆಗಳಲ್ಲಿ 2,927 ಹೊಸ ಕೋವಿಡ್ ಪ್ರಕರಣಗಳು ಪತ್ತೆ…
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,927 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 4,30,65,496ಕ್ಕೆ ಏರಿಕೆಯಾಗಿದೆ. ಮಂಗಳವಾರಕ್ಕೆ ಹೋಲಿಸಿದರೆ ಹೊಸ ಕರೋನಾ ಪ್ರಕರಣಗಳಲ್ಲಿ ಶೇಕಡಾ 17.8 ರಷ್ಟು ಹೆಚ್ಚಳವಾಗಿದೆ. ಮತ್ತೊಂದೆಡೆ, ಸೋಂಕಿನಿಂದ 32 ಜನರು ಸಾವನ್ನಪ್ಪಿದ್ದು, ದೇಶದಲ್ಲಿ ಕೋವಿಡ್ -19 ನಿಂದ ಸಾವನ್ನಪ್ಪಿದವರ ಸಂಖ್ಯೆ 5,23,654 ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ ಕೋವಿಡ್ -19 ಸಕ್ರಿಯ ಪ್ರಕರಣಗಳ ಸಂಖ್ಯೆ 16,279 ಕ್ಕೆ ಏರಿದೆ, ಕಳೆದ 24 ಗಂಟೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಸಂಖ್ಯೆಯಲ್ಲಿ 643ಕ್ಕೆ ಹೆಚ್ಚಳವಾಗಿದೆ.
ಮಾಹಿತಿಯ ಪ್ರಕಾರ, ದೇಶದಲ್ಲಿ ಒಟ್ಟು 4,25,25,563 ಜನರು ಸೋಂಕು ಮುಕ್ತರಾಗಿದ್ದಾರೆ ಮತ್ತು ಕೋವಿಡ್ -19 ನಿಂದ ಸಾವಿನ ಪ್ರಮಾಣ ಶೇಕಡಾ 1.22 ರಷ್ಟಿದೆ. ರಾಷ್ಟ್ರವ್ಯಾಪಿ ಲಸಿಕೆ ಅಭಿಯಾನದ ಅಡಿಯಲ್ಲಿ ಇದುವರೆಗೆ 188.19 ಕೋಟಿಗೂ ಹೆಚ್ಚು ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ.
India logs 2,927 Covid-19 cases in 24 hrs, 17% higher than yesterday; 32 deaths