ಐಸಿಸಿ ಶ್ರೇಯಾಂಕ ಪಟ್ಟಿ : ಎರಡನೇ ಸ್ಥಾನಕ್ಕೇರಿದ ಟೀಮ್ ಇಂಡಿಯಾ
ಚೆನ್ನೈ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಪಡೆ 317 ರನ್ ಗಳಿಂದ ಇಂಗ್ಲೆಂಡ್ ತಂಡವನ್ನು ಪರಾಭವಗೊಳಿಸಿದೆ.
ಇದರೊಂದಿಗೆ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ಈಗ 1-1ರಿಂದ ಸಮಗೊಂಡಿದೆ. ಮೊದಲ ಟೆಸ್ಟ್ ಪಂದ್ಯದ ಹೀನಾಯ ಸೋಲಿಗೆ ಟೀಮ್ ಇಂಡಿಯಾ ಪ್ರತಿಕಾರ ತೀರಿಸಿಕೊಂಡಿದೆ.
ಇನ್ನೊಂದೆಡೆ ಈ ಗೆಲುವಿನ ಮೂಲಕ ಟೀಮ್ ಇಂಡಿಯಾ ಐಸಿಸಿ ಟೆಸ್ಟ್ ಶ್ರೇಯಾಂಕ ಪಟ್ಟಿಯಲ್ಲಿ ಮತ್ತೆ ಬಡ್ತಿ ಪಡೆದುಕೊಂಡಿದೆ. ಸದ್ಯದ ಶ್ರೇಯಾಂಕ ಪಟ್ಟಿಯಲ್ಲಿ ಟೀಮ್ ಇಂಡಿಯಾ ಎರಡನೇ ಸ್ಥಾನಕ್ಕೇರಿದೆ. ಇಂಗ್ಲೆಂಡ್ ತಂಡ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಶ್ರೇಯಾಂಕ ಪಟ್ಟಿಯಲ್ಲಿ ನ್ಯೂಜಿಲೆಂಡ್ ಅಗ್ರ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ಮೂರನೇ ಸ್ಥಾನದಲ್ಲಿದೆ.
ಫೈನಲ್ ಪ್ರವೇಶಿಸಬೇಕಾದ್ರೆ ಟೀಮ್ ಇಂಡಿಯಾ ಇನ್ನುಳಿದ ಎರಡು ಪಂದ್ಯಗಳಲ್ಲಿ ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡು ಇನ್ನೊಂದು ಪಂದ್ಯವನ್ನು ಗೆಲ್ಲಬೇಕಿದೆ.









