ಮಹಿಳಾ ಏಷ್ಯಾಕಪ್ ಟಿ20 ಟೂರ್ನಿಯಲ್ಲ ಇಂದು ಭಾರತ ಹಾಗೂ ನೇಪಾಳ ಮಧ್ಯೆ ಫೈಟ್ ನಡೆಯಲಿದೆ. ಈ ಪಂದ್ಯ ಗೆದ್ದರೆ ಭಾರತೀಯ ವನಿತೆಯರು ಸತತ ಮೂರು ಪಂದ್ಯ ಗೆದ್ದು, ಸೆಮಿಫೈನಲ್ ಪ್ರವೇಶಿಸಲಿದ್ದಾರೆ.
ಈಗಾಗಲೇ ಭಾರತ ತಂಡ 2 ಪಂದ್ಯಗಳಲ್ಲಿ ಗೆಲುವು ದಾಖಲಿಸಿದೆ. ಮೊದಲ ಪಂದ್ಯದಲ್ಲಿ ಪಾಕಿಸ್ತಾನ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿತ್ತು. ಎರಡನೇ ಪಂದ್ಯದಲ್ಲಿ ಯುಎಇ ವಿರುದ್ಧ ಟೀಮ್ ಇಂಡಿಯಾ 78 ರನ್ ಗಳ ಗೆಲುವು ದಾಖಲಿಸಿದೆ. ಈ ಮೂಲಕ ಭಾರತ ತಂಡ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ತಂಡವು ನೇಪಾಳ ವಿರುದ್ಧ ಗೆದ್ದರೆ ಅಧಿಕೃತವಾಗಿ ಸೆಮಿಫೈನಲ್ ಪ್ರವೇಶಿಸಲಿದೆ.
ಇನ್ನೊಂದೆಡೆ ನೇಪಾಳ ತಂಡಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಏಕೆಂದರೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಭಾರತ ಮೊದಲ ಸ್ಥಾನದಲ್ಲಿದ್ದರೆ, ಪಾಕಿಸ್ತಾನ್ ತಂಡ ಎರಡನೇ ಸ್ಥಾನದಲ್ಲಿದೆ. ನೇಪಾಳ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡಿದೆ. ಅಂದರೆ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಜಯ ಸಾಧಿಸಿದರೆ ಮಾತ್ರ ನೇಪಾಳ ತಂಡಕ್ಕೆ ಸೆಮಿಫೈನಲ್ ಪ್ರವೇಶಿಸಲು ಅವಕಾಶವಿದೆ.
ಇಲ್ಲವಾದರೆ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ್ ತಂಡವು ಯುಎಇ ವಿರುದ್ಧ ಹೀನಾಯವಾಗಿ ಸೋಲನುಭವಿಸುವುದನ್ನು ಎದುರು ನೋಡಬೇಕಾಗುತ್ತದೆ. ಈ ಪಂದ್ಯ ಇಂದು ಸಂಜೆ 7 ಗಂಟೆಗೆ ಆರಂಭವಾಗಲಿದೆ. ಭಾರತ ತಂಡದಲ್ಲಿ ಭಾರತ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ಜೆಮಿಮಾ ರೊಡ್ರಿಗಸ್, ರೇಣುಕಾ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭಾನಾ, ರಾಧಾ ಯಾದವ್, ಸಜನಾ ಸಜೀವನ್, ತನುಜಾ ಕನ್ವರ್ ಸ್ಥಾನ ಪಡೆದಿದ್ದಾರೆ.







