ಟೀಮ್ ಇಂಡಿಯಾ – ನ್ಯೂಜಿಲೆಂಡ್ ತಂಡಗಳ ಟೆಸ್ಟ್ ಪಂದ್ಯಗಳ ಅಂಕಿ ಅಂಶಗಳ ಪ್ರಕಾರ..!
ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯ ಕಡೆಗೆ ಈಗ ಕ್ರಿಕೆಟ್ ಜಗತ್ತಿನ ಚಿತ್ತ ನೆಟ್ಟಿದೆ.
ಜೂನ್ 18ರಿಂದ ಇಂಗ್ಲೆಂಡ್ ನ ಸೌತಾಂಪ್ಟನ್ ನಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು ಪ್ರಶಸ್ತಿಗಾಗಿ ಜಿದ್ದಾಜಿದ್ದಿನ ಫೈಟ್ ನಡೆಸಲಿವೆ.
ಈಗಾಗಲೇ ಉಭಯ ತಂಡಗಳು ಕಠಿಣ ಅಭ್ಯಾಸ ನಡೆಸಿ ಫೈನಲ್ ಪಂದ್ಯವನ್ನು ಎದುರು ನೋಡುತ್ತಿದೆ. ಚೊಚ್ಚಲ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ಬಗ್ಗೆ ಕ್ರಿಕೆಟ್ ವಿಶ್ಲೇಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂಕಪಟ್ಟಿಯಲ್ಲಿ ಟೀಮ್ ಇಂಡಿಯಾ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನು 1-0ಯಿಂದ ಗೆದ್ದ ನ್ಯೂಜಿಲೆಂಡ್ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ.
ಟೆಸ್ಟ್ ಚಾಂಪಿಯನ್ ಷಿಪ್ ನ ಸರಣಿಯಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ 2-0ಯಿಂದ ಸೋಲು ಅನುಭವಿಸಿದೆ. ಇನ್ನುಳಿದಂತೆ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್, ಬಾಂಗ್ಲಾದೇಶ, ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ವಿರುದ್ಧ ಸರಣಿ ಗೆದ್ದುಕೊಂಡಿದೆ. ಇಲ್ಲಿ ಮುಖ್ಯವಾಗಿ ಹಿನ್ನಡೆ ಅನುಭವಿಸಿದ್ದು ನ್ಯೂಜಿಲೆಂಡ್ ವಿರುದ್ಧ ಮಾತ್ರ..
ಅದನ್ನು ಹೊರತುಪಡಿಸಿ 2000ದಿಂದ ಇಲ್ಲಿಯವರೆಗಿನ ಟೆಸ್ಟ್ ಪಂದ್ಯಗಳ ಅಂಕಿ ಅಂಶಗಳನ್ನು ನೋಡಿದಾಗ ಟೀಮ್ ಇಂಡಿಯಾ ಒಂದು ಹೆಜ್ಜೆ ಮುಂದಿದೆ.
ಕಳೆದ 20 ವರ್ಷಗಳಲ್ಲಿ ಟೀಮ್ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು 19 ಟೆಸ್ಟ್ ಪಂದ್ಯಗಳನ್ನು ಆಡಿವೆ. ಇದ್ರಲ್ಲಿ ಏಳು ಪಂದ್ಯಗಳಲ್ಲಿ ಭಾರತ ಗೆದ್ರೆ, ನ್ಯೂಜಿಲೆಂಡ್ ಐದು ಪಂದ್ಯಗಳನ್ನು ಗೆದ್ದಿದೆ. ಏಳು ಪಂದ್ಯಗಳು ಡ್ರಾನಲ್ಲಿ ಅಂತ್ಯಗೊಂಡಿವೆ.
ಹಾಗೇ ಸರಣಿಗಳ ಲೆಕ್ಕಚಾರವನ್ನು ನೋಡುವುದಾದ್ರೆ, ಟೀಮ್ ಇಂಡಿಯಾ ನಾಲ್ಕು ಸರಣಿಗಳನ್ನು ಗೆದ್ದುಕೊಂಡಿದೆ. ನ್ಯೂಜಿಲೆಂಡ್ ಮೂರು ಸರಣಿಗಳನ್ನು ಕೈವಶಮಾಡಿಕೊಂಡಿದೆ.
ಒಟ್ಟಿನಲ್ಲಿ ಕಳೆದ 20 ವರ್ಷಗಳಲ್ಲಿ ಇದೀಗ ಉಭಯ ತಂಡಗಳು 20ನೇ ಟೆಸ್ಟ್ ಪಂದ್ಯವನ್ನು ಆಡುತ್ತಿವೆ. ಈ ಪಂದ್ಯ ಈ ಹಿಂದಿನ ಪಂದ್ಯಗಳಿಗಿಂತಲೂ ಹೆಚ್ಚು ಮಹತ್ವವನ್ನು ಪಡೆದುಕೊಂಡಿದೆ. ಅಲ್ಲದೆ ವಿಶ್ವ ಟೆಸ್ಟ್ ಚಾಂಪಿಯನ್ ಯಾರು ಆಗ್ತಾರೆ ಅನ್ನೋ ಕುತೂಹಲಕ್ಕೆ ಈ ಪಂದ್ಯ ಸಾಕ್ಷಿಯಾಗಲಿದೆ.








