ಕೋವಿಡ್-19 ಸಾವಿನ ಸಂಖ್ಯೆಯಲ್ಲಿ ಇಟಲಿಯನ್ನು ಹಿಂದಿಕ್ಕಿದ ಭಾರತ
ಹೊಸದಿಲ್ಲಿ, ಅಗಸ್ಟ್ 2: ಕೊರೋನವೈರಸ್ ನಿಂದ ಸಾವನ್ನಪ್ಪಿದವರ ಸಂಖ್ಯೆಯಲ್ಲಿ ಭಾರತವು ಇಟಲಿಯನ್ನು ಹಿಂದಿಕ್ಕಿ ವಿಶ್ವದಲ್ಲಿ ಅತಿ ಹೆಚ್ಚು ಕೊರೊನಾಗೆ ಬಲಿಯಾದ ರಾಷ್ಟ್ರಗಳ ಪಟ್ಟಿಯಲ್ಲಿ ಐದನೇ ಸ್ಥಾನವನ್ನು ಪಡೆದುಕೊಂಡಿದೆ.
ಭಾರತದಲ್ಲಿ ಇಲ್ಲಿಯವರೆಗೆ 17,50,754 ಕೊರೋನವೈರಸ್ ಸೋಂಕು ಪ್ರಕರಣಗಳು ದಾಖಲಾಗಿದ್ದು, ಕೊರೋನಾಗೆ ಬಲಿಯಾದವರ ಸಂಖ್ಯೆ 37 ಸಾವಿರ ದಾಟಿದೆ.
ಇತ್ತೀಚಿನ ವರದಿಗಳ ಪ್ರಕಾರ, ಇಟಲಿಯು 35,132 ರ ಸಾವಿನ ಪ್ರಮಾಣವನ್ನು ಹೊಂದಿದ್ದು, ಆರನೇ ಸ್ಥಾನಕ್ಕೆ ಇಳಿದಿದೆ. ಮೊದಲ ಸ್ಥಾನದಲ್ಲಿ ಇರುವ ಅಮೆರಿಕದಲ್ಲಿ 1,57,214 ಪ್ರಕರಣಗಳು ಕೊರೋನಾಗೆ ಬಲಿಯಾಗಿದ್ದಾರೆ. ಬ್ರೆಜಿಲ್ ನಲ್ಲಿ 92,789, ಯುನೈಟೆಡ್ ಕಿಂಗ್‌ಡಮ್ ನಲ್ಲಿ 46,193 ಮತ್ತು ಮೆಕ್ಸಿಕೊ ದಲ್ಲಿ 46,688 ಪ್ರಕರಣಗಳು ಸಾವನ್ನಪ್ಪಿದ್ದು, ಕ್ರಮವಾಗಿ ಅಮೆರಿಕದ ನಂತರದ ಸ್ಥಾನಗಳಲ್ಲಿ ಇವೆ.
ಜಾಗತಿಕವಾಗಿ ಅತಿ ಹೆಚ್ಚು ಕೊರೋನಾ ಪೀಡಿತರಿರುವ ದೇಶಗಳ ಪಟ್ಟಿಯಲ್ಲಿ ಮೊದಲನೇ ಸ್ಥಾನದಲ್ಲಿ ಅಮೆರಿಕವಿದ್ದರೆ, ಎರಡನೇ ಸ್ಥಾನದಲ್ಲಿ ಬ್ರೆಜಿಲ್ ಇದೆ. ಮೂರನೇ ಸ್ಥಾನದಲ್ಲಿ ಭಾರತವಿದೆ.