ನವದೆಹಲಿ : ದೇಶದಲ್ಲಿ ಕೊರೊನಾಸುರನ ಆರ್ಭಟ ಮುಂದುವರಿದಿದ್ದು, ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರತ ಚೀನಾವನ್ನ ಮೀರಿಸಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಇಲ್ಲಿಯವರೆಗೆ 85,215 ಪ್ರಕರಣಗಳು ವರದಿಯಾಗಿವೆ. ಈವರೆಗೆ ಭಾರತದಲ್ಲಿ 30152 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಹೆಮ್ಮಾರಿಗೆ 2752 ಮಂದಿ ಬಲಿಯಾಗಿದ್ದಾರೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 3970 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ.
ಮಹಾರಾಷ್ಟ್ರದಲ್ಲಿ 1,576 ಹೊಸ ಪ್ರಕರಣಗಳು ಬೆಳಕಿಗೆ ಬಂದಿದ್ದು, ಈವರೆಗೆ 1,068 ಜನರು ಸಾವಿಗೀಡಾಗಿದ್ದಾರೆ. ಅಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 29,100ಕ್ಕೆ ತಲುಪಿದೆ.
ತಮಿಳುನಾಡು 434 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 10 ಸಾವಿರ ಗಡಿ ದಾಟಿದೆ. ಗುಜರಾತ್ನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 9931ಕ್ಕೆ ಏರಿದ್ದು, ಈವರೆಗೆ 606 ಮಂದಿ ಸಾವಿಗೀಡಾಗಿದ್ದಾರೆ. ದೆಹಲಿಯಲ್ಲಿ ಈವರೆಗೆ ಒಟ್ಟು 8895 ಕೋವಿಡ್-19 ಪ್ರಕರಣಗಳು ದಾಖಲಾಗಿದ್ದು, 123 ಮಂದಿ ಮೃತಪಟ್ಟಿದ್ದಾರೆ. ರಾಜಸ್ಥಾನದಲ್ಲಿ 125, ಪಶ್ಚಿಮ ಬಂಗಾಳದಲ್ಲಿ 225, ಮಧ್ಯಪ್ರದೇಶದಲ್ಲಿ 239 ಜನರು ಕೊರೊನಾ ಸೋಂಕಿನಿAದ ಸಾವಿಗೀಡಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.








