ADVERTISEMENT
Tuesday, June 30, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home National

ಕಾಶ್ಮೀರ : ಪಾಕ್ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

Namratha Rao by Namratha Rao
October 28, 2021
in National, Newsbeat, ದೇಶ - ವಿದೇಶ
Share on FacebookShare on TwitterShare on WhatsappShare on Telegram

ಕಾಶ್ಮೀರ : ಪಾಕ್ ಪರ ಘೋಷಣೆ ವಿರೋಧಿಸಿದ ವಿದ್ಯಾರ್ಥಿನಿಗೆ ಜೀವ ಬೆದರಿಕೆ

ಕಾಶ್ಮೀರ :  ಟಿ 20 ವಿಶ್ವಕಪ್ ಪಂದ್ಯಾವಳಿಯಲ್ಲಿ ಪಾಕ್ ಮತ್ತು ಭಾರತದ ನಡುವೆ ನಡೆದ ಹೈ ವೋಲ್ಟೇಜ್ ಮ್ಯಾಚ್ ನಲ್ಲಿ  ಪಾಕಿಸ್ತಾನವು ಭಾರತದ ವಿರುದ್ಧ ಜಯಗಳಿಸಿತ್ತು. ಈ ಮೂಲಕ ಭಾರತದ ಜೊತೆಗೆ ಪಾಕಿಸ್ತಾನ ಈವರೆಗೂ  ವಿಶ್ವ ಕಪ್ ನಲ್ಲಿ ಗೆದ್ದೇ ಇಲ್ಲ ಎಂಬ ಅಪಖ್ಯಾತಿಗೆ ಬ್ರೇಕ್ ಹಾಕಿತ್ತು.

Related posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

June 30, 2026
ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

June 30, 2026

ಅದಾದ ನಂತರ ಭಾರತದಲ್ಲಿ ಕೆಲವೆಡೆ ಕೆಲ ಕಿಡಿಗೇಡಿಗಳು ಪಾಕ್ ಪರ ಘೋಷಣೆ ಕೂಗಿದ್ದು, ವಿದ್ಯಾರ್ಥಿಗಳ ಗುಂಪುಗಳ ನಡುವೆ ಗಲಾಟೆಯಂತಹ ಪ್ರಕರಣಗಳು ಬೆಳಕಿಗೆ ಬಂದಿತ್ತು. ಅನೇಕರ ವಿರುದ್ಧ ಇದೇ ಕಾರಣಕ್ಕೆ FIR ಸಹ ದಾಖಲಾಗಿದೆ. ಇದೀಗ ಪಾಕಿಸ್ತಾನದ ಪರ ಘೋಷಣೆಗಳನ್ನು ಕೂಗಿದ್ದನ್ನು ವಿರೋಧಿಸಿದ್ದಕ್ಕಾಗಿ ವಿದ್ಯಾರ್ಥಿನಿಯೊಬ್ಬಳಿಗೆ ಜೀವ ಬೆದರಿಕೆ ಬಂದಿದೆ. ಈ ಬಗ್ಗೆ ಶ್ರೀನಗರದ ವೈದ್ಯಕೀಯ ವಿದ್ಯಾರ್ಥಿನಿ ದೂರಿದ್ದಾರೆ.

ಪಾಕ್ ಪರ ಘೋಷಣೆ ಕೂಗಿದ ವಿಚಾರಕ್ಕೆ ಸ್ಕಿಮ್ಸ್ ನ ಕೆಲವು ವಿದ್ಯಾರ್ಥಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಅಬ್ದುಲ್ಲಾ ಘಜಿ ಎಂಬ ಟ್ವಿಟ್ಟರ್ ಹ್ಯಾಂಡಲ್ ನಲ್ಲಿ ಇದಕ್ಕೆಲ್ಲಾ ಕಾರಣ ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಜಮ್ವಾಲ್ ಎಂದು ಆರೋಪಿಸಲಾಗಿದ್ದು, ಆಕೆ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾಳೆ ಎನ್ನಲಾಗಿದೆ. ಇದಾದ ನಂತರ ಆಕೆಗೆ ಜೀವ ಬೆದರಿಕೆ ಬಂದಿದೆ ಎನ್ನಲಾಗ್ತಿದೆ.

ಅನನ್ಯಾ ವಿರುದ್ಧ ಅಬ್ದುಲ್ಲಾ ಘಾಜಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು, ಸ್ಕಿಮ್ಸ್ ಎಫ್‌ಐಆರ್ ಮತ್ತು ಯುಎಪಿಎ ಕಾಯ್ದೆ ಹಿಂದೆ ಪೊಲೀಸ್ ಮಾಹಿತಿದಾರ ಮತ್ತು ಘಟನೆಯ ‘ಪ್ರಮುಖ ಆರೋಪಿ’ಯಾಗಿರುವ ಆರ್‌ಎಸ್‌ಎಸ್ ಕಾರ್ಯಕರ್ತೆ ಅನನ್ಯಾ ಜಮ್ವಾಲ್ ಇದ್ದಾರೆ. ಡೋಗ್ರಾ ನಿವಾಸಿಯಾಗಿರುವ ಅನನ್ಯಾ ಪ್ರಸ್ತುತ ಕಾಲೇಜಿನಲ್ಲಿ ವೈದ್ಯಕೀಯ ಕೋರ್ಸ್ ಓದುತ್ತಿದ್ದಾರೆ.

ಸಂಘ ಮತ್ತು ಇತರ ಆರ್‌ಎಸ್‌ಎಸ್ ಕಾರ್ಯಕರ್ತರೊಂದಿಗೆ ಸೇರಿ ಸ್ಥಳೀಯ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕುವ ಮೂಲಕ ಬೃಹತ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ ಎಂದು ಘಾಜಿ ಆರೋಪಿಸಿದ್ದಾನೆ. ಅನನ್ಯಾ ಜಮ್ವಾಲ್ ಈ ಆರೋಪಗಳನ್ನು ನಿರಾಕರಿಸಿದ್ದು, ದೇಶದ್ರೋಹಿಗಳನ್ನು ಬೆಂಬಲಿಸುವವರನ್ನು ಮಾತ್ರ ನಾನು ಎದುರು ಹಾಕಿಕೊಂಡಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ತನಗೆ ಬೇರೆ ಬೇರೆ ರೀತಿಯಲ್ಲಿ ಕಿರುಕುಳ ನೀಡಲು ಪ್ರಾರಂಭಿಸಿದ್ದಾರೆ ಅನನ್ಯಾ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ತಾನು ಆ ವೀಡಿಯೊಗಳನ್ನು ಸೋರಿಕೆ ಮಾಡಿಲ್ಲ, ಅಥವಾ ಪೊಲೀಸ್ ಮಾಹಿತಿದಾರರೂ ಅಲ್ಲ. ಸಾಮಾಜಿಕ ಮಾಧ್ಯಮ ಬಳಕೆದಾರರಲ್ಲಿ ತನ್ನ ಬಗ್ಗೆ ನಕಲಿ ಮಾಹಿತಿಯನ್ನು ಹರಡದಂತೆ ಅನನ್ಯಾ ವಿನಂತಿಸಿದ್ದಾರೆ.

ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ಇತರರು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುವ ಮತ್ತು ಪಾಕಿಸ್ತಾನದ ವಿಜಯವನ್ನು ಆಚರಿಸುತ್ತಿರುವ ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದ ಕರಣ್ ನಗರದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಸ್ಕಿಮ್ಸ್ ಸೌರಾದಲ್ಲಿ ಹಾಸ್ಟೆಲ್‌ಗಳಲ್ಲಿ ವಾಸಿಸುವ ಕೆಲವು ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಠಿಣ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (UAPA) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ.

Tags: #saakshatv#T20 World Cupindia - pakisthan matchKashmir
ShareTweetSendShare
Join us on:

Related Posts

ಜೇಬಿಗೆ 50 ಕೋಟಿ ಕ್ಷೇತ್ರಕ್ಕೆ 100 ಕೋಟಿ: ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಆಮಿಷ – ಮೈತ್ರಿ ಮುರಿಯಲು ಕೈ ಪಡೆಯಿಂದ ನೂರಾರು ಕೋಟಿ ಆಫರ್: ಅಡ್ಡಮತದಾನದ ಅಸಲಿ ಗುಟ್ಟು ರಟ್ಟು ಮಾಡಿದ ಕುಮಾರಸ್ವಾಮಿ

ಬಿಡದಿ ವಿಚಾರದಲ್ಲಿ ಚರ್ಚೆಗೆ ಈಗಲೂ ಸಿದ್ಧ: ಹೆಚ್.ಡಿ. ಕುಮಾರಸ್ವಾಮಿ

by Shwetha
June 30, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಬಿಡದಿ ಟೌನ್‌ಶಿಪ್‌ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರಿಗೆ ಮತ್ತೊಮ್ಮೆ ಬಹಿರಂಗ ಚರ್ಚೆಯ ಆಹ್ವಾನ ನೀಡಿದ್ದಾರೆ. ಈ...

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

ಮತದಾರರೇ ಎಚ್ಚರ: ಈ ಕೆಲಸ ಮಾಡದಿದ್ದರೆ ಮತದಾನದ ಹಕ್ಕಿಗೆ ಕುತ್ತು ಬರಬಹುದು -ಇಂದೇ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ

by Shwetha
June 30, 2026
0

ನಿಮ್ಮ ಮತ ನಿಮ್ಮ ಹಕ್ಕು. ಆದರೆ ಆ ಹಕ್ಕನ್ನು ಚಲಾಯಿಸಲು ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದು ಅನಿವಾರ್ಯ. ಭಾರತೀಯ ಚುನಾವಣಾ ಆಯೋಗದ ಆದೇಶದಂತೆ ಇಂದಿನಿಂದ ರಾಜ್ಯಾದ್ಯಂತ...

ರಾಜಕಾರಣವೇ ಬೇಡ ಎನಿಸುವಷ್ಟು ನೋವು ಕೊಟ್ಟರು:ಪತ್ನಿಯ ವಿರುದ್ಧವೂ ಸುಳ್ಳು ಆರೋಪ ಮಾಡಿ ಮಾನಸಿಕ ಹಿಂಸೆ ನೀಡಿದರು; ಸಿದ್ದರಾಮಯ್ಯ ಕಣ್ಣೀರಿನ ವಿದಾಯದ ನುಡಿ

ಮಾಸ್ ಲೀಡರ್ ಗೆ ಸ್ವಪಕ್ಷೀಯರಿಂದಲೇ ಸಂಚು ಸಿದ್ದರಾಮಯ್ಯ ಅವರನ್ನು ಮೂಲೆಗುಂಪು ಮಾಡುತ್ತಿರುವುದರ ಹಿಂದಿದೆ ಭಾರಿ ಲೆಕ್ಕಾಚಾರ :ಕಿಂಗ್ ಮೇಕರ್ ಪಟ್ಟಕ್ಕಾಗಿ ನಡೆಯುತ್ತಿದೆ ಒಳಗೊಳಗೆ ರಾಜಕೀಯ ಯುದ್ಧ

by Shwetha
June 30, 2026
0

ಕರ್ನಾಟಕ ರಾಜಕೀಯದ ಇತಿಹಾಸದಲ್ಲಿ ಅತಿ ದೊಡ್ಡ ಮಾಸ್ ಲೀಡರ್ ಎನಿಸಿಕೊಂಡಿರುವ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯದ ಬಗ್ಗೆ ಈಗ ಕಾಂಗ್ರೆಸ್ ಒಳಾಂಗಣದಲ್ಲಿ ಭಾರಿ ಚರ್ಚೆಗಳು ನಡೆಯುತ್ತಿವೆ. ಮುಖ್ಯಮಂತ್ರಿ...

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

ಗೃಹಜ್ಯೋತಿಗೆ ಮರು ಅರ್ಜಿ ಸಲ್ಲಿಕೆ; ಹೊಸ ಅರ್ಜಿ ವಿತರಣೆ ಘೋಷಿಸಿದ ಸಿಎಂ ಡಿಕೆಶಿ

by Shwetha
June 30, 2026
0

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಮಹತ್ವದ ಘೋಷಣೆ ಮಾಡಿದ್ದಾರೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ...

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

ಶ್ರೀರಾಮ ನಮ್ಮ ಅಸ್ಮಿತೆ ಆರೋಪಿಗಳ ಪರ ವಾದಿಸಿದರೆ ವಕೀಲರಿಗೆ 5 ಲಕ್ಷ ದಂಡ ಅಯೋಧ್ಯಾ ಬಾರ್ ಕೌನ್ಸಿಲ್ ಖಡಕ್ ಆದೇಶ

by Shwetha
June 30, 2026
0

ಅಯೋಧ್ಯೆಯ ಭವ್ಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆ ಹಣದಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪ ಈಗ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಗರಣದ ತನಿಖೆ ಚುರುಕುಗೊಂಡಿದ್ದು ಈಗಾಗಲೇ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram