ಬೆಂಗಳೂರು: ನ್ಯೂಜಿಲೆಂಡ್ (New Zealand) ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ಹೀನಾಯ ಪ್ರದರ್ಶನ ನೀಡಿದೆ.
ವಿಲಿಯಂ ಓ’ರೂರ್ಕ್ (William O’Rourke), ಮ್ಯಾಟ್ ಹೆನ್ರಿ ವೇಗಿಗಳ ಆರ್ಭಟಕ್ಕೆ ನಲುಗಿದ ಭಾರತ ತಂಡವು (Team India) 46 ರನ್ ಗಳಿಗೆ ಆಲೌಟ್ ಆಗುವ ಮೂಲಕ ಕೆಟ್ಟ ದಾಖಲೆ ಬರೆದಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಅತೀ ಕೆಟ್ಟ ದಾಖಲೆಯೊಂದನ್ನು ಹೆಗಲಿಗೇರಿಸಿಕೊಂಡಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಭಾರತ ತಂಡ ಮಕಾಡೆ ಮಲಗಿತು. ನಿಧಾನಗತಿ ಬ್ಯಾಟಿಂಗ್ ಆರಂಭಿಸಿದ ಭಾರತ ಒಂದೊಂದು ಕದಿಯಲು ತಿಣುಕಾಡಿತು. ರೋಹಿತ್ (Rohit Sharma), ಕೊಹ್ಲಿ, ರಾಹುಲ್ ಸೇರಿದಂತೆ ಅಗ್ರಕ್ರಮಾಂಕದ ಬ್ಯಾಟರ್ಗಳು ಶೂನ್ಯಕ್ಕೆ ಪೆವಿಲಿಯನ್ ಸೇರಿದರು. ಕೊನೆಯದಾಗಿ ಭಾರತದ ಹೋರಾಟ ಕೇವಲ 46 ರನ್ ಗಳಿಗೆ ಅಂತ್ಯವಾಯಿತು.
ಭಾರತದ ಪರ ರಿಷಭ್ ಪಂತ್ (Rishabh Pant) 20, ಯಶಸ್ವಿ ಜೈಸ್ವಾಲ್ 13 ರನ್ ಗಳಿದರು. ಉಳಿದ ಆಟಗಾರರು ಅಲ್ಪ ಮೊತ್ತಕ್ಕೆ ವಿಕೆಟ್ ಒಪ್ಪಿಸಿ ಹೊರನಡೆದರು. ರೋಹಿತ್ ಶರ್ಮಾ 2ರನ್, ಕುಲೀಪ್ ಯಾದವ್ 2ರನ್, ಜಸ್ಪ್ರೀತ್ ಬುಮ್ರಾ 1 ರನ್, ಸಿರಾಜ್ 4 ರನ್ ಗಳಿಸಿದರು. ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ಕೆ.ಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್ ಶೂನ್ಯಕ್ಕೆ ಔಟ್ ಆದರು.