ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮಕ್ಕೆ ಭಾರತ ತಯಾರಿ
ನವದೆಹಲಿ : ಭಾರತ ವಿಶ್ವದ ಅತಿದೊಡ್ಡ ಲಸಿಕಾ ಕಾರ್ಯಕ್ರಮಕ್ಕೆ ತಯಾರಿ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಗುಜರಾತ್ನ ರಾಜ್ ಕೋಟ್ ನಲ್ಲಿ 1,195 ಕೋಟಿ ವೆಚ್ಚದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಶಂಕುಸ್ಥಾಪನಾ ಕಾರ್ಯಕ್ರಮ ನಡೆಯಿತು. ಇದನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ವಿಡಿಡೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಿದರು.
ಭಾಷಣದಲ್ಲಿ ಪ್ರಧಾನಿಗಳು, ಸ್ವಾಸ್ಥ್ಯ ಹೈ ಸಂಪದ ಹೈ ಎನ್ನೋದನ್ನ 2020 ವರ್ಷ ನಮಗೆ ಮನವರಿಕೆ ಮಾಡಿಕೊಟ್ಟಿದೆ. 2020 ಸವಾಲುಗಳಿಂದಲೇ ತುಂಬಿದ ವರ್ಷವಾಗಿತ್ತು.
ಈಗ ಭಾರತ ವಿಶ್ವದ ಲಸಿಕೆ ವಿಚಾರದಲ್ಲಿ ಕೇಂದ್ರ ಸ್ಥಳವಾಗಿ ಹೊರಹೊಮ್ಮಿದ್ದು, 2021ರಲ್ಲಿ ಭಾರತ ಆರೋಗ್ಯ ರಕ್ಷಣೆಯಲ್ಲಿ ಹೆಚ್ಚಿನ ಕಾಳಜಿ ವಹಿಸಿ ಬಲವರ್ಧಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.
https://twitter.com/i/status/1344595834495782915
ಅಲ್ಲದೆ ಮುಂದಿನ ವರ್ಷ ಅತೀ ದೊಡ್ಡ ಲಸಿಕಾ ಕಾರ್ಯಕ್ರಮ ಆರಂಭವಾಗುತ್ತಿದೆ. ಇದರಿಂದಾಗಿ ದೇಶದಲ್ಲಿ ಸದ್ಯ ಕೊರೊನಾ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ ಎಂದು ತಿಳಿಸಿದರು.
ಇನ್ನು ಈ ಕಾರ್ಯಕ್ರಮದಲ್ಲಿ ಗುಜರಾಜ್ ರಾಜ್ಯಪಾಲ ಆಚಾರ್ಯ ದೇವವ್ರತ್, ಗುಜರಾತ್ ಸಿಎಂ ವಿಜಯ್ ರೂಪಾನಿ ಸೇರಿದಂತೆ ಹಲವು ಉಪಸ್ಥಿತರಿದ್ದರು.









