Covid Update – ಒಂದೇ ದಿನದಲ್ಲಿ 17,073 ಕೋವಿಡ್ ಪ್ರಕರಣ ಪತ್ತೆ..
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 17,073 ಹೊಸ ಕರೋನವೈರಸ್ ಸೋಂಕುಗಳು ಪತ್ತೆಯಾಗಿವೆ. ಇಲ್ಲಿಯವರೆಗೆ ಒಟ್ಟು ಕೋವಿಡ್ ಪೀಡಿತರ ಸಂಖ್ಯೆ 4,34,07,046 ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಪ್ರಕಟಿಸಿದ ಅಂಕಿ ಅಂಶಗಳ ಪ್ರಕಾರ ನಿನ್ನೆ 21 ಹೊಸ ಕೋವಿಡ್ ಸಾವುಗಳು ಸಂಭವಿಸಿದ್ದು ಸಾವಿನ ಸಂಖ್ಯೆ 5,25,020 ಕ್ಕೆ ಏರಿಕೆಯಾಗಿದೆ ಎಂದು ಸಚಿವಾಲಯ ಬೆಳಿಗ್ಗೆ 8 ಗಂಟೆಗೆ ಪ್ರಕಟಿಸಿದ ಡೇಟಾದಿಂದ ತಿಳಿದುಬಂದಿದೆ. ಸಕ್ರಿಯ ಪ್ರಕರಣಗಳು 94,420 ಕ್ಕೆ ಏರಿದೆ. 24 ಗಂಟೆಗಳ ಅವಧಿಯಲ್ಲಿ ಸಕ್ರಿಯ COVID-19 ಪ್ರಕರಣಗಳ ಸಂಖ್ಯೆಯಲ್ಲಿ 1,844 ಪ್ರಕರಣಗಳ ಹೆಚ್ಚಳ ದಾಖಲಾಗಿದೆ.
ದೈನಂದಿನ ಪಾಸಿಟಿವಿಟಿ ದರವು ಶೇಕಡಾ 5.62 ರಷ್ಟಿದ್ದರೆ, ವಾರದ ಪಾಸಿಟಿವಿಟಿ ದರವು ಶೇಕಡಾ 3.39 ರಷ್ಟಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 4,27,87,606 ಕ್ಕೆ ತಲುಪಿದೆ. ರಾಷ್ಟ್ರವ್ಯಾಪಿ COVID-19 ಲಸಿಕಾ ಅಭಿಯಾನದ ಅಡಿಯಲ್ಲಿ ಇಲ್ಲಿಯವರೆಗೆ 197.11 ಕೋಟಿ ಡೋಸ್ ಲಸಿಕೆಗಳನ್ನ ನೀಡಲಾಗಿದೆ.








