India ದೇಶದಲ್ಲಿ ಮತ್ತೆ ಕೊರೊನಾ ಅಬ್ಬರ : 3,52,991 ಹೊಸ ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕೊರೊನಾ ಅಬ್ಬರ ಮುಂದುವರೆದಿದ್ದು, ಮತ್ತೆ ಮೂರು ಲಕ್ಷಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಕಳೆದ 24 ಗಂಟೆಗಳಲ್ಲಿ 3,52,991 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 2,812 ಮಂದಿ ಮೃತಪಟ್ಟಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,73,13,163ಕ್ಕೆ, ಮೃತಪಟ್ಟವರ ಸಂಖ್ಯೆ 1,95,123ಕ್ಕೆ ಏರಿಕೆಯಾಗಿದೆ.
ಇನ್ನು ಕೊರೊನಾ ಸೋಂಕಿನಿಂದ 2,19,272ಮಂದಿ ಗುಣಮುಖರಾಗಿದ್ದು, ಒಟ್ಟಾರೆ ಗುಣಮುಖರಾದವ ಸಂಖ್ಯೆ 1,43,04,382ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ್ನೂ 28,13,658 ಸಕ್ರಿಯ ಪ್ರಕರಣಗಳಿವೆ.










