ಕೊರೊನಾ ಅಪ್ ಡೇಟ್ : ಕಳೆದ 24 ಗಂಟೇಲಿ 3 ಲಕ್ಷ ಸೋಂಕಿತರು ಗುಣಮುಖ
ನವದೆಹಲಿ : ದೇಶದಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ 3,68,147 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 3 ಲಕ್ಷ ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,68,147 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಾಖಲಾಗಿವೆ. ಇದೇ ಅವಧಿಯಲ್ಲಿ 3,417 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಸೋಂಕಿತರ ಸಂಖ್ಯೆ 1,99,25,604ಕ್ಕೆ ಮೃತಪಟ್ಟವರ ಸಂಖ್ಯೆ 2,18,959 ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3 ಲಕ್ಷಕ್ಕೂ ಅಧಿಕ ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ದೇಶದಲ್ಲಿನ್ನೂ 34,13,642 ಸಕ್ರಿಯ ಪ್ರಕರಣಗಳಿವೆ.