ದೇಶ್ ವಾಸಿಯೋ ಎಚ್ಚರ : ಕಳೆದ 24 ಗಂಟೆಯಲ್ಲಿ 43,846 ಜನರಲ್ಲಿ ಸೋಂಕು ಪತ್ತೆ
India records over 43,000 new Covid cases India
ನವದೆಹಲಿ : ದೇಶದಲ್ಲಿ ನಿನ್ನೆ ಕೊರೊನಾ ಸ್ಫೋಟವಾಗಿದೆ. ಕಳೆದ 24 ಗಂಟೆಗಳಲ್ಲಿ 43,846 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1,15,99,130ಕ್ಕೆ ಏರಿಕೆಯಾಗಿದೆ.
ಇದಲ್ಲದೇ ನಿನ್ನೆ ಹೆಮ್ಮಾರಿ ವೈರಸ್ ಗೆ 197 ಜನರು ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,59,755 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಸದ್ಯ 3,09,087 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 22,956 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,
ಈವರೆಗೂ 1,11,30,288 ಸೋಂಕಿತರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.