ದೇಶದಲ್ಲಿ ಕೊರೊನಾ ಮರಣಕೇಕೆ : 3,60,960 ಕೇಸ್ ಪತ್ತೆ, 3,293 ಮಂದಿ ಸಾವು
ನವದೆಹಲಿ : ಭಾರತದಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ 3 ಲಕ್ಷಕ್ಕೂ ಅಧಿಕ ಕೊರೊನಾ ಕೇಸ್ ಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 3,60,960 ಮಂದಿಗೆ ಹೊಸದಾಗಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಇದೇ ಅವಧಿಯಲ್ಲಿ ದೇಶದಾದ್ಯಂತ 3,293 ಜನರು ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 1 ಕೋಟಿ 79 ಲಕ್ಷದ 97 ಸಾವಿರ ದಾಟಿದೆ.
ಇನ್ನು ಇದೇ ಮೊದಲು ಭಾರತದಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 3ಸಾವಿರದ ಗಡಿ ದಾಡಿದ್ದು, ಈ ಮೂಲಕ ಒಟ್ಟು ಮೃತಪಟ್ಟವರ ಸಂಖ್ಯೆ 2,01,187 ಆಗಿದೆ.
ದೇಶದಲ್ಲಿ ಇದುವರೆಗೂ 1 ಕೋಟಿ 48 ಲಕ್ಷದ 17 ಸಾವಿರ ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿ ಇನ್ನೂ ಕೂಡ 29 ಲಕ್ಷದ 78 ಸಾವಿರಕ್ಕೂ ಹೆಚ್ಚು ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.