ದೇಶದಲ್ಲಿ ಕೊರೊನಾ ಮರಣಕೇಕೆ : ಒಂದೇ ದಿನ 4,187 ಮಂದಿ ಬಲಿ covid19
ನವದೆಹಲಿ : ದೇಶದಲ್ಲಿ ಕೊರೊನಾ ಎರಡನೇ ಅಲೆಯ ಮರಣಮೃದಂಗ ಮುಂದುವರೆದಿದೆ.
ಇದೇ ಮೊದಲ ಬಾರಿಗೆ ದೇಶದಲ್ಲಿ ದಿನವೊಂದರಲ್ಲಿ ವರದಿಯಾದ ಕೋವಿಡ್ ಮೃತರ ಸಂಖ್ಯೆ 4 ಸಾವಿರ ಗಡಿ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,078 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, 4,187 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 2,18,92,676ಕ್ಕೆ ಹಾಗೂ ಸಾವಿನ ಸಂಖ್ಯೆ 2,38,270ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ 3,18,609 ಮಂದಿ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು,
ಇಲ್ಲಿಯವರೆಗೆ 1,79,30,960 ಸೋಂಕಿತರು ವೈರಸ್ ನಿಂದ ಚೇತರಿಸಿಕೊಂಡಿದ್ದಾರೆ. ದೇಶದಲ್ಲಿ ಸದ್ಯ 37,23,446 ಸಕ್ರಿಯ ಪ್ರಕರಣಗಳಿವೆ.










