ದೇಶದಲ್ಲಿ ಕಡಿಮೆಯಾಗುತ್ತಿದೆ ಪಾಸಿಟಿವಿಟಿ ರೇಟ್ : ನಿನ್ನೆ 62,480 ಜನರಿಗೆ ಕೊರೊನಾ covid19
ನವದೆಹಲಿ : ಭಾರತದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 62,480 ಜನರಲ್ಲಿ ಸೋಂಕು ಪತ್ತೆಯಾಗಿದೆ. ದೇಶದಲ್ಲಿನ್ನೂ 7,98,656 ಕೋವಿಡ್ ಸಕ್ರಿಯ ಪ್ರಕರಣಗಳಿವೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 62,480 ಮಂದಿಗೆ ಸೋಂಕು ದೃಢಪಟ್ಟಿದ್ದು, 1,587 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,97,62,793ಕ್ಕೆ ಏರಿಕೆಯಾಗಿದೆ. ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,83,490ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ 88,977 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 7,98,656 ಸಕ್ರಿಯ ಪ್ರಕರಣಗಳಿವೆ.