IND vs SA : ಕಟಕ್ ಪಂದ್ಯಕ್ಕೆ ವರುಣನ ಅಡ್ಡಿ..?
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೋತಿರುವ ಟೀಂ ಇಂಡಿಯಾ, ಎರಡನೇ ಪಂದ್ಯದಲ್ಲಿ ಗೆಲ್ಲಬೇಕೆಂಬ ತವಕದಲ್ಲಿದೆ.
ಭಾನುವಾರ ಕಟಕ್‌ನಲ್ಲಿ ನಡೆಯಲಿರುವ ಎರಡನೇ ಟಿ20ಯಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತ ಮುಖಾಮುಖಿಯಾಗಲಿವೆ.
ಈ ಪಂದ್ಯವನ್ನು ಹೇಗಾದರೂ ಗೆದ್ದು ಸರಣಿಯನ್ನು ಸಮ ಮಾಡಿಕೊಳ್ಳುವ ನಿರೀಕ್ಷೆಯಲ್ಲಿ ಭಾರತ ಇದೆ.
ಸುಮಾರು ಎರಡು ವರ್ಷಗಳ ನಂತರ ಕಟಕ್‌ನಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯಲಿದೆ.
ಆದರೆ, ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ. ಭಾನುವಾರ ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.

ಭಾನುವಾರ ಸಂಜೆ ಕಟಕ್‌ನಲ್ಲಿ ಮಳೆ ಬೀಳದು ಎಂದು ನಾವು ಖಂಡಿತವಾಗಿ ಹೇಳಲು ಸಾಧ್ಯವಿಲ್ಲ. ಲಘು ಮಳೆಯಾಗುವ ಸಾಧ್ಯತೆ.
ಆದರೆ, ಭಾರೀ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಭುವನೇಶ್ವರ ಪ್ರಾದೇಶಿಕ ಹವಾಮಾನ ಕೇಂದ್ರದ ನಿರ್ದೇಶಕ ಬಿಸ್ವಾಸ್ ತಿಳಿಸಿದ್ದಾರೆ.
ಮಳೆ ಬಂದರೂ ಪಂದ್ಯಕ್ಕೆ ಅಡ್ಡಿಯಾಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಒಡಿಶಾ ಕ್ರಿಕೆಟ್ ಸಂಸ್ಥೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಟೀಮ್ ಇಂಡಿಯಾ ಅಂತಿಮ ತಂಡ (ಅಂದಾಜು): ಇಶಾನ್ ಕಿಶನ್, ರುತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ಸಿ), ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಅಕ್ಷರ್ ಪಟೇಲ್, ಹರ್ಷಲ್ ಪಟೇಲ್, ಭುವನೇಶ್ವರ್ ಕುಮಾರ್, ಯುಜ್ವೇಂದ್ರ ಚಾಹಲ್, ಅವೇಶ್ ಖಾನ್