ಭಾರತ ಹಾಗೂ ಮಾಲ್ಡೀವ್ಸ್ ಮಧ್ಯೆ ಉದ್ವಿಗ್ನತೆ ಆರಂಭವಾಗಿದ್ದು, ಅಲ್ಲಿಯ ರಾಯಭಾರಿಗೆ ಭಾರತ ಸಮನ್ಸ್ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾಲ್ಡೀವ್ಸ್ ಸಚಿವರು ನೀಡಿರುವ ವಿವಾದಾತ್ಮಕ ಹೇಳಿಕೆಯೇ ಉದ್ವಿಗ್ನತೆಗೆ ಕಾರಣವಾಗಿದೆ.
ಆದರೆ, ಮಾಲ್ಡೀವ್ಸ್ ಸರ್ಕಾರ ಇದು ಅವರ ವೈಯಕ್ತಿಕ ಅಭಿಪ್ರಾಯ ಎಂದು ಹೇಳಿದ್ದು, ಭಾರತದಲ್ಲಿ ವಿರೋಧ ವ್ಯಕ್ತವಾಗಿದೆ. ಹೀಗಾಗಿ ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ಮಾಲ್ಡೀವ್ಸ್ ವಿರುದ್ಧ ಪ್ರತಿಭಟನೆ ನಡೆಯುತ್ತಿದೆ. ಭಾರತದಲ್ಲಿ #BoycottMaldives ಟ್ರೆಂಡ್ ಆರಂಭವಾಗಿದೆ. ಜನರು ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಿಕೊಳ್ಳುತ್ತಿದ್ದಾರೆ.