ಮತ್ತೆ ಸ್ತಬ್ಧವಾಗಲಿದೆ ಭಾರತ : ದೇಶದಾದ್ಯಂತ ಲಾಕ್ ಡೌನ್ ಗೆ ಚಿಂತನೆ lockdown
ನವದೆಹಲಿ : ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನರನ್ನ ಆತಂಕಕ್ಕೆ ದೂಡಿದೆ. ಕೆಲ ರಾಜ್ಯಗಳಲ್ಲಿ ಕೊರೊನಾ ಕಂಟ್ರೋಲ್ ಗೆ ಈಗಾಗಲೇ ಕಠಿಣ ಕ್ರಮಗಳನ್ನ ತೆಗೆದುಕೊಂಡರೂ ಸೋಂಕು ಕಡಿಮೆ ಆಗುತ್ತಿಲ್ಲ. ಹೀಗಾಗಿ ದೇಶದಾದ್ಯಂತ ಲಾಕ್ ಡೌನ್ ಜಾರಿಗೆ ಕೇಂದ್ರ ಸರ್ಕಾರ ಚಿಂತನೆ ನಡೆಸುತ್ತಿದೆ.
ಇಂದು ದೇಶದಲ್ಲಿ 3.68 ಲಕ್ಷ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಹಿನ್ನೆಲೆ ಕೊರೊನಾ ಟಾಸ್ಕ್ ಪೋರ್ಸ್ ತಂಡ ಕೇಂದ್ರಕ್ಕೆ ವರದಿ ನೀಡಿದ್ದು, ಅದರಲ್ಲಿ ಸದ್ಯ ದೇಶದಲ್ಲಿ ಲಾಕ್ ಡೌನ್ ಅನಿವಾರ್ಯ ಎಂದು ತಿಳಿಸಿದೆ.
ಈ ಟಾಸ್ಕ್ ಪೋರ್ಸ್ ನಲ್ಲಿ ಭಾರತದ ಪ್ರಮುಖ ಆರೋಗ್ಯ ಸಂಸ್ಥೆಗಳಾದ ಏಮ್ಸ್ ಮತ್ತು ಇಂಡಿಯಲ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ಸದಸ್ಯರನ್ನು ಒಳಗೊಂಡಿದೆ. ಈ ಸಮಿತಿ ಕೇಂದ್ರ ದೇಶದಲ್ಲಿ ಕೊರೊನಾ ಕಂಟ್ರೋಲ್ ಗೆ ಲಾಕ್ ಡೌನ್ ಅನಿವಾರ್ಯ ಎಂದಿದೆ.