ಟೀಮ್ ಇಂಡಿಯಾ ವಿರುದ್ಧ ಆಸ್ಟ್ರೇಲಿಯಾ ಟಿ-ಟ್ವೆಂಟಿ, ಏಕದಿನ ತಂಡ
ಟೀಮ್ ಇಂಡಿಯಾ ವಿರುದ್ಧದ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳ ಸರಣಿಗೆ ಆಸ್ಟ್ರೇಲಿಯಾ ತಂಡವನ್ನು ಆಯ್ಕೆ ಮಾಡಲಾಗಿದೆ.
18 ಸದಸ್ಯರನ್ನೊಳಗೊಂಡ ಆಸ್ಟ್ರೇಲಿಯಾ ತಂಡವನ್ನು ಆರೋನ್ ಫಿಂಚ್ ಮುನ್ನಡೆಸಲಿದ್ದಾರೆ. ಪ್ಯಾಟ್ ಕಮಿನ್ಸ್ ಅವರು ಉಪ ನಾಯಕನಾಗಿ ನೇಮಕಗೊಂಡಿದ್ದಾರೆ.
ತಂಡದಲ್ಲಿ ಕೆಲವೊಂದು ಹೊಸ ಮುಖಗಳಿಗೆ ಅವಕಾಶ ನೀಡಲಾಗಿದೆ. 21ರ ಹರೆಯದ ಕೆಮರೂನ್ ಗ್ರೀನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಕೆಮರೂನ್ ಗ್ರೀನ್ ಅವರು ಭಾರತ ಎ ತಂಡದ ವಿರುದ್ಧ ಆಡಿದ್ದರು. ಗ್ರೀನ್ ಅವರು ಆಲ್ ರೌಂಡರ್ ಆಗಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್ ನಲ್ಲೂ ಉತ್ತಮ ಪ್ರದರ್ಶನ ನೀಡಿದ್ದರು.
ಇನ್ನು ಐಪಿಎಲ್ ವೇಳೆ ಗಾಯಗೊಂಡಿರುವ ಮಿಟ್ಚೆಲ್ ಮಾರ್ಶ್ ಅವರು ತಂಡದಲ್ಲಿ ಸ್ಥಾನ ಪಡೆದುಕೊಂಡಿಲ್ಲ. ಮಾರ್ಶ್ ಅವರು ಸನ್ ರೈಸರ್ಸ್ ಹೈದ್ರಬಾದ್ ತಂಡದ ಆಟಗಾರನಾಗಿದ್ದರು. ಇವರ ಬದಲಿಗೆ ಮೋಸೆಸ್ ಹೆನ್ರಿಕ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.
ಆಸ್ಟ್ರೇಲಿಯಾ ಟಿ-ಟ್ವೆಂಟಿ ಮತ್ತು ಏಕದಿನ ತಂಡ
ಆರೋನ್ ಫಿಂಚ್ (ನಾಯಕ), ಪ್ಯಾಟ್ ಕಮಿನ್ಸ್ (ಉಪನಾಯಕ), ಸಿಯಾನ್ ಆಬೋಟ್, ಆಶ್ಟನ್ ಆಗರ್, ಅಲೆಕ್ಸ್ ಕ್ಯಾರೆ, ಕೆಮರೂನ್ ಗ್ರೀನ್, ಜೋಶ್ ಹಾಝೆಲ್ ವುಡ್, ಮೋಸೆಸ್ ಹೆನ್ರಿಕ್ಸ್, ಮಾರ್ನಸ್ ಲಾಬುಚ್ಚೆಂಚ್, ಗ್ಲೇನ್ ಮ್ಯಾಕ್ಸ್ ವೆಲ್, ಡೇನಿಯಲ್ ಸ್ಯಾಮ್ಸ್, ಕೇನ್ ರಿಚರ್ಡಸನ್, ಸ್ಟೀವನ್ ಸ್ಮಿತ್, ಮಿಟ್ಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೋನಿಸ್, ಮ್ಯಾಥ್ಯೂ ವಾಡೆ, ಡೇವಿಡ್ ವಾರ್ನರ್, ಆಡಮ್ ಝಂಪಾ.
ಟೀಮ್ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಮೂರು ಟಿ-ಟ್ವೆಂಟಿ ಪಂದ್ಯ, ಮೂರು ಏಕದಿನ ಪಂದ್ಯ ಹಾಗೂ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಯನ್ನು ಆಡಲಿದೆ.
ಏಕದಿನ ಸರಣಿ ನವೆಂಬರ್ 27ರಿಂದ ಆರಂಭವಾಗಲಿದೆ. ಟಿ-ಟ್ವೆಂಟಿ ಸರಣಿ ಡಿಸೆಂಬರ್ 4ರಿಂದ ಎಂಟರವರೆಗೆ ನಡೆಯಲಿದೆ. ನಂತರ ಟೆಸ್ಟ್ ಸರಣಿ ಶುರುವಾಗಲಿದೆ.








