ADVERTISEMENT
Saturday, June 27, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಭಾರತ – ಇಂಗ್ಲೆಂಡ್ ಟೆಸ್ಟ್ ಸರಣಿ – ಟೀಮ್ ಇಂಡಿಯಾ ಆಟಗಾರನಿಗೆ ಕೋವಿಡ್ ಸೋಂಕು ದೃಢ..!

admin by admin
July 15, 2021
in Newsbeat, Sports, ಕ್ರೀಡೆ
team india saakshatv england
Share on FacebookShare on TwitterShare on WhatsappShare on Telegram

ಭಾರತ – ಇಂಗ್ಲೆಂಡ್ ಟೆಸ್ಟ್ ಸರಣಿ – ಟೀಮ್ ಇಂಡಿಯಾ ಆಟಗಾರನಿಗೆ ಕೋವಿಡ್ ಸೋಂಕು ದೃಢ..!

team india saakshatv englandಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಆಗಸ್ಟ್ 4ರಿಂದ ಮೊದಲ ಟೆಸ್ಟ್ ಪಂದ್ಯ ಶುರುವಾಗಲಿದೆ.
ಇದರ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಇದು ಬಿಸಿಸಿಐ ಮತ್ತು ಇಂಗ್ಲೆಂಡ್ ಕ್ರಿಕೆಟ್ ಮಂಡಳಿಯನ್ನು ಆತಂಕಕ್ಕೀಡು ಮಾಡಿದೆ.
ಹೌದು, ಟೀಮ್ ಇಂಡಿಯಾ ಆಟಗಾರನೊಬ್ಬನಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಜುಲೈ 10ರಂದು ನಡೆಸಲಾಗಿದ್ದ ಟೆಸ್ಟ್ ನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈಗಾಗಲೇ ಜುಲೈ 10 ಮತ್ತು ಜುಲೈ 14ರಂದು ಎರಡು ಬಾರಿ ಟೀಮ್ ಇಂಡಿಯಾ ಆಟಗಾರರಿಗೆ ಕೋವಿಡ್ ಟೆಸ್ಟ್ ನಡೆಸಲಾಗಿತ್ತು. ಜುಲೈ 10ರ ಕೋವಿಡ್ ಪರೀಕ್ಷೆಯಲ್ಲಿ ಒಬ್ಬ ಕ್ರಿಕೆಟಿಗನಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಆದ್ರೆ ಜುಲೈ 14ರ ಕೋವಿಡ್ ಟೆಸ್ಟ್ ನ ವರದಿ ಇನ್ನೂ ಬಂದಿಲ್ಲ. ಈ ನಡುವೆ, ಟೀಮ್ ಇಂಡಿಯಾದ ಇನ್ನಷ್ಟು ಆಟಗಾರರಿಗೆ ಕೋವಿಡ್ ಸೋಂಕು ಪತ್ತೆಯಾಗುವ ಸಾಧ್ಯತೆಗಳಿವೆ ಎಂದು ಎನ್ನಲಾಗುತ್ತಿದೆ.
ಈ ನಡುವೆ ಟೀಮ್ ಇಂಡಿಯಾ ಜುಲೈ 20ರಂದು ಅಭ್ಯಾಸ ಪಂದ್ಯವನ್ನು ಆಡಲಿದೆ. ಹೀಗಾಗಿ ಟೀಮ್ ಇಂಡಿಯಾ ಇಂದು ಡರ್ಹಾಮ್ ಗೆ ಪ್ರಯಾಣ ಬೆಳೆಸಲಿದೆ. ಆದ್ರೆ ಕೋವಿಡ್ ಪಾಸಿಟಿವ್ ಪತ್ತೆಯಾಗಿರುವ ಆಟಗಾರ ಕ್ವಾರಂಟೈನ್ ನಲ್ಲಿರಲಿದ್ದಾರೆ.
team india saakshatv englandಇನ್ನೊಂದೆಡೆ ಇಂಗ್ಲೆಂಡ್ ಮತ್ತು ಪಾಕಿಸ್ತಾನ, ಇಂಗ್ಲೆಂಡ್ ಮತ್ತು ಶ್ರೀಲಂಕಾ ನಡುವಿನ ಪಂದ್ಯದಲ್ಲೂ ಕೆಲವು ಆಟಗಾರರಿಗೆ ಕೋವಿಡ್ ಸೋಂಕು ದೃಢವಾಗಿತ್ತು. ಇದೀಗ ಟೀಮ್ ಇಂಡಿಯಾ ಆಟಗಾರರನ್ನು ಕೂಡ ಕೋವಿಡ್ ಸೋಂಕು ಆವರಿಸಿಕೊಳ್ಳುವ ಆತಂಕ ಎದುರಾಗಿದೆ.
ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪಂದ್ಯದ ನಂತರ ಟೀಮ್ ಇಂಡಿಯಾ ಆಟಗಾರರು ಜೈವಿಕ ಸುರಕ್ಷತೆಯಿಂದ ಹೊರಬಂದು ರಿಲ್ಯಾಕ್ಸ್ ಮೂಡ್ ನಲ್ಲಿದ್ದರು. ಅಲ್ಲದೆ ಯೂರೋ ಕಪ್ ಪಂದ್ಯಗಳನ್ನು ಕೆಲವು ಆಟಗಾರರು ವೀಕ್ಷಣೆ ಮಾಡಿದ್ದರು. ಜೊತೆಗೆ ಇಂಗ್ಲೆಂಡ್ ನ ಪ್ರವಾಸಿ ತಾಣಗಳಿಗೂ ಭೇಟಿ ಕೊಟ್ಟಿದ್ದರು. ಇದೀಗ ಟೆಸ್ಟ್ ಸರಣಿಗೆ ಮುನ್ನ ಜೈವಿಕ ಸುರಕ್ಷತೆಯೊಳಗೆ ಸೇರುವ ಮುನ್ನವೇ ಟೀಮ್ ಇಂಡಿಯಾಗೆ ಕೋವಿಡ್ ಆತಂಕ ಶುರುವಾಗಿದೆ.
ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯ ಜೈವಿಕ ಸುರಕ್ಷತೆಯಡಿಯಲ್ಲಿ ನಡೆಯಲಿದೆ. ಅಲ್ಲದೆ ಪ್ರೇಕ್ಷಕರಿಗೂ ಪಂದ್ಯ ನೋಡಲು ಅವಕಾಶವಿಲ್ಲ. ಎರಡು ಅಭ್ಯಾಸ ಪಂದ್ಯಗಳ ನಂತರ ಟೀಮ್ ಇಂಡಿಯಾ ಆಟಗಾರರು ಟೆಸ್ಟ್ ಸರಣಿಯ ಜೈವಿಕ ಸುರಕ್ಷತೆಯೊಳಗೆ ಸೇರಿಕೊಳ್ಳಲಿದ್ದಾರೆ.

Related posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

June 27, 2026
ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

June 27, 2026
Tags: #saakshatvbccicovidCovid19CricketecbEnglandindiaIndia Tour of England 2021Sportsteam indiatest cricketvirat kohli
ShareTweetSendShare
Join us on:

Related Posts

CM Yogi Adityanath

ಸನಾತನ ಧರ್ಮದ ಜೊತೆ ಆಟವಾಡಿದರೆ ಸುಮ್ಮನಿರಲ್ಲ: ಅಯೋಧ್ಯೆ ದೇಣಿಗೆ ಹಗರಣದ ಬೆನ್ನಲ್ಲೇ ಗುಡುಗಿದ ಸಿಎಂ ಯೋಗಿ

by Shwetha
June 27, 2026
0

ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ವಿಶ್ವದಾದ್ಯಂತ ಇರುವ ಕೋಟ್ಯಂತರ ಭಕ್ತರು ಶ್ರದ್ಧಾಭಕ್ತಿಯಿಂದ ಸಮರ್ಪಿಸಿದ ದೇಣಿಗೆ ಮತ್ತು ಕಾಣಿಕೆಯನ್ನು ದುರುಪಯೋಗಪಡಿಸಿಕೊಂಡ ಘಟನೆ ಈಗ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ಅಕ್ರಮದ...

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

ಅಡ್ಡ ಮತದಾನಕ್ಕೆ ನಾನೇ ಕಾರಣ ಎಂಬ ಆರೋಪ ಸುಳ್ಳು : ನನ್ನ ಟೈಮ್ ಚೆನ್ನಾಗಿದೆ, ಪಕ್ಷ ವಿರೋಧಿಗಳಿಗೆ ಹೆದರಲ್ಲ- ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ವಿರೋಧಿಗಳಿಗೆ ವಿಜಯೇಂದ್ರ ಖಡಕ್ ಉತ್ತರ

by Shwetha
June 27, 2026
0

ವಿಧಾನ ಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಯಿಂದ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲಗಳಿಗೆ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಈಗ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ...

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

ಇಡಿ ಸಿಬಿಐ ಭಯಕ್ಕೆ ತಾಯಿಯಂತಾ ಪಕ್ಷವನ್ನೇ ಮಾರಿಕೊಂಡ್ರು: ಹೆತ್ತ ತಾಯಿಗೆ ದ್ರೋಹ ಬಗೆದಂತೆ ಪಕ್ಷಾಂತರ- ದ್ರೋಹಿಗಳಿಗೆ ಜನರೇ ಪಾಠ ಕಲಿಸ್ತಾರೆ ಎಂದು ಗುಡುಗಿದ ಮಮತಾ ಬ್ಯಾನರ್ಜಿ

by Shwetha
June 27, 2026
0

ಪಕ್ಷದ ಸಂಕಷ್ಟದ ಸಮಯದಲ್ಲಿ ತೃಣಮೂಲ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ಶಾಸಕರು ಮತ್ತು ಸಂಸದರ ವಿರುದ್ಧ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ...

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ

by Shwetha
June 27, 2026
0

ಜಗತ್ತಿನಾದ್ಯಂತ ಸಂಭವಿಸುತ್ತಿರುವ ಸರಣಿ ನೈಸರ್ಗಿಕ ವಿಕೋಪಗಳು ಮತ್ತು ಮಳೆಯಿಲ್ಲದೆ ಕಂಗಾಲಾಗಿರುವ ರೈತ ಸಮುದಾಯದ ಪರಿಸ್ಥಿತಿಯನ್ನು ಗಮನಿಸಿದರೆ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ನುಡಿದಿದ್ದ ಭವಿಷ್ಯವಾಣಿ...

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

ತಾಕತ್ತಿದ್ದರೆ ನನ್ನ ಮೇಲೆ ಐಟಿ ಇಡಿ ದಾಳಿ ಮಾಡಿಸಿ : ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಪ್ರದೀಪ್ ಈಶ್ವರ್ ಓಪನ್ ಚಾಲೆಂಜ್

by Shwetha
June 27, 2026
0

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮತ್ತು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ಈಗ ತಾರಕಕ್ಕೇರಿದೆ. ತಮ್ಮ ಶಿಕ್ಷಣ ಸಂಸ್ಥೆಯ ಬಗ್ಗೆ ಕುಮಾರಸ್ವಾಮಿ ನೀಡಿದ್ದ ಹೇಳಿಕೆಗೆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram