ಜೈಪುರ್: ಭಾರತ ಹಾಗೂ ಅಮೆರಿಕ ಸೇನೆಯಿಂದ ಜಂಟಿ ಮಿಲಿಟರಿ ಸಮರಾಭ್ಯಾಸ ನಡೆದಿದೆ.
ರಾಜಸ್ಥಾನದ ಬಿಕಾನೇರ್ನ ಮಹಾಜನ್ ಫೀಲ್ಡ್ನಲ್ಲಿ ಸಮರಾಭ್ಯಾಸ ಆರಂಭವಾಗಿದೆ. ಸೆ. 22ರವರೆಗೂ ಈ ಅಭ್ಯಾಸ ಮುಂದುವರೆಯಲಿದೆ.
ಭಾರತ ಮತ್ತು ಅಮೆರಿಕದ ಒಟ್ಟು 1,200 ಸೈನಿಕರು ಈ ಅಭ್ಯಾಸದಲ್ಲಿ ಭಾಗವಹಿಸುತ್ತಿದ್ದಾರೆ. ಪಥಸಂಚಲನದೊಂದಿಗೆ ಸೇನಾ ಸಮರಾಭ್ಯಾಸ ಆರಂಭಗೊಂಡಿತು. ಈ ಆವೃತ್ತಿಯು ಸೈನ್ಯದ ಶಕ್ತಿಯನ್ನು ಸೂಚಿಸುತ್ತದೆ.
600 ಸಿಬ್ಬಂದಿಯನ್ನು ಒಳಗೊಂಡಿರುವ ಭಾರತೀಯ ಸೇನಾ ತುಕಡಿ ರಜಪೂತ್ ರೆಜಿಮೆಂಟ್ನ ಬೆಟಾಲಿಯನ್ ಮತ್ತು ಇತರ ಶಸ್ತ್ರಾಸ್ತ್ರ ಪಡೆಗಳ ಸಿಬ್ಬಂದಿ ಇದರಲ್ಲಿ ಭಾಗವಹಿಸಲಿದ್ದಾರೆ.
ವಿಶ್ವಸಂಸ್ಥೆಯ ಆದೇಶದ ಅಡಿಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳನ್ನು ಕೈಗೊಳ್ಳಲು ಎರಡೂ ಕಡೆಯ ಜಂಟಿ ಮಿಲಿಟರಿ ಸಾಮರ್ಥ್ಯ್ ಹೆಚ್ಚಿಸುವುದು ಈ ಅಭ್ಯಾಸದ ಗುರಿಯಾಗಿದೆ.