ಮೂರನೇ ಟೆಸ್ಟ್ : ಇಂಗ್ಲೆಂಡ್ ಗೆ ಆರಂಭಿಕ ಆಘಾತ
ಅಹ್ಮದಾಬಾದ್ : ನರೇಂದ್ರ ಮೋದಿ ಅಂಗಳದಲ್ಲಿ ನಡೆಯುತ್ತಿರುವ ಡೇ ಅಂಡ್ ನೈಟ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ತಂಡ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದು, ಟೀಂ ಇಂಡಿಯಾ ಆರಂಭದಲ್ಲೇ ಮಿಂಚು ಹರಿಸಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಗೆ ಬಂದ ಇಂಗ್ಲೆಂಡ್ ಗೆ ವೇಗಿ ಇಶಾಂತ್ ಶರ್ಮಾ ಶಾಕ್ ನೀಡಿದ್ರು. ಆರಂಭಿಕ ಬ್ಯಾಟ್ಸ್ ಮನ್ ಡೊಮಿನಿಕ್ ಸಿಬ್ಲಿ ಅವರನ್ನು ಶೂನ್ಯಕ್ಕೆ ಔಟ್ ಮಾಡಿದ್ರು.
ಇದಾದ ಬಳಿಕ ದಾಳಿಗೆ ಬಂದ ಸ್ಪಿನ್ನರ್ ಅಕ್ಷರ್ ಪಟೇಲ್ ಸರಣಿಯಲ್ಲಿ ಮೊದಲ ಪಂದ್ಯವಾಡುತ್ತಿರುವ ಬೆನ್ ಸ್ಟ್ರೋ ಅವರನ್ನ ಶೂನ್ಯಕ್ಕೆ ಔಟ್ ಮಾಡಿದ್ರು.
ಸದ್ಯ ಇಂಗ್ಲೆಂಡ್ ತಂಡ 55ಕ್ಕೆ 2 ವಿಕೆಟ್ ಕಳೆದುಕೊಂಡಿದ್ದು, ನಾಯಕ ರೂಟ್ (9) ರನ್, ಜಾಕ್ ಕಾಲ್ರೆ (44) ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ.
ಭಾರತ ತಂಡದಲ್ಲಿ 2 ಬದಲಾವಣೆ
ಇನ್ನು ಈ ಪಂದ್ಯಕ್ಕಾಗಿ ಭಾರತ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ಆಡಿದ್ದ ಸಿರಾಜ್ ಮತ್ತು ಕುಲದೀಪ್ ಯಾದವ್ ಅವರಿಗೆ ಕೋಕ್ ನೀಡಲಾಗಿದೆ. ಇವರ ಬದಲಿಗೆ ಬೂಮ್ರಾ ಮತ್ತು ವಾಷಿಂಗ್ಟನ್ ಸುಂದರ್ ಸ್ಥಾನ ಪಡೆದಿದ್ದಾರೆ.
ತಂಡಗಳು ಇಂತಿವೆ
ಭಾರತ
ರೋಹಿತ್ ಶರ್ಮಾ, ಶುಭ್ ಮನ್ ಗಿಲ್, ಚೇತೇಶ್ವರ ಪೂಜಾರಾ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಬ್ ಪಂತ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ಜಸ್ ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ
ಇಂಗ್ಲೆಂಡ್
ಡೊಮಿನಿಕ್ ಸಿಬ್ಲಿ, ಝಾಕ್ ಕ್ರಾಲೆ, ಜಾನಿ ಬೈರ್ ಸ್ಟೋವ್, ಜೋ ರೂಟ್ (ನಾಯಕ), ಬೆನ್ ಸ್ಟೋಕ್ಸ್, ಆಲ್ಲಿ ಪೋಪ್, ಬೆನ್ ಫೋಕ್ಸ್ (ವಿಕೆಟ್ ಕೀಪಪ್), ಜೋಫ್ರಾ ಆರ್ಚರ್, ಜ್ಯಾಕ್ ಲೀಚ್, ಸ್ಟುವರ್ಟ್ ಬ್ರಾಡ್, ಜೇಮ್ಸ್ ಆಂಡರ್ಸನ್