ಟೆಸ್ಟ್ ಸರಣಿ | ಪಂದ್ಯ ಸೋಲಿಗೆ ಕಾರಣ ಬಿಚ್ಚಿಟ್ಟ ಕೊಹ್ಲಿ
ಅಡಿಲೇಡ್ : ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಹೀನಾಯವಾಗಿ ಸೋಲು ಅನುಭವಿಸಿದೆ.
ಪಂದ್ಯದ ಬಳಿಕ ಮಾತನಾಡಿರುವ ಟೀಂ ಇಂಡಿಯಾದ ನಾಯಕ ವಿರಾಟ್, ಸೋಲಿನ ಭಾವನೆಯನ್ನು ಪದಗಳಲ್ಲಿ ಹೇಳುವುದು ತುಂಬಾ ಕಷ್ಟ. ನಾವು 60 ರನ್ ಗಳ ಮುನ್ನಡೆಯೊಂದಿಗೆ ಬ್ಯಾಟಿಂಗ್ ಆರಂಭಿಸಿದ್ರೂ, ಕೇವಲ 36 ರನ್ ಗಳಿಗೆ ಪತನ ಕಂಡಿದ್ದು ಬೇಸರದ ಸಂಗತಿ. ನಮ್ಮ ಬ್ಯಾಟಿಂಗ್ ನಲ್ಲಿ ತೀಕ್ಷ್ಣತೆ ಇಲ್ಲದಿರುವುದೇ ಮುಖ್ಯ ಕಾರಣ. ಇಂದಿನ ಫಲಿತಾಂಶ ಎಲ್ಲರಿಗೂ ನಿರಾಸೆ ತರಿಸಿದೆ ಎಂದಿದ್ದಾರೆ.
ಅಲ್ಲದೆ ಈ ಎಲ್ಲಾ ತಪ್ಪುಗಳನ್ನು ಸರಿಪಡಿಸಿಕೊಂಡು ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಉತ್ತಮ ಫಲಿತಾಂಶ ಪಡೆಯುತ್ತೇವೆ” ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಛೇ..ಛೇ.. ಛೇ.. 36 ರನ್… ಟೆಸ್ಟ್ ಕ್ರಿಕೆಟ್ ನಲ್ಲಿ ಭಾರತದ ಕನಿಷ್ಠ ಸ್ಕೋರ್..!
ಪಿಂಕ್ ಬಾಲ್ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 244 ರನ್ ಗಳಿಸಿದ್ರೆ, ಆಸ್ಟ್ರೇಲಿಯಾ 191 ರನ್ ಬಾರಿಸಿತ್ತು. 60 ರನ್ ಗಳ ಮುನ್ನಡೆ ಸಾಧಿಸಿ ಎರಡನೇ ಇನ್ನಿಂಗ್ಸ್ ಆರಂಭಿಸಿದ ಭಾರತ ಆಸೀಸ್ ಬೌಲರ್ ಗಳ ದಾಳಿಗೆ ತತ್ತರಿಸಿ ಕೇವಲ 36 ರನ್ ಗೆ ಆಲೌಟ್ ಆಯ್ತು. 90 ರನ್ ಗಳ ಸುಲಭ ಗುರಿ ಬೆನ್ನಟ್ಟಿದ ಕಾಂಗರೂ ಪಡೆ 2 ವಿಕೆಟ್ ಕಳೆದುಕೊಂಡು 93 ರನ್ ಗಳಿಸಿತು. ಆ ಮೂಲಕ 4 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಅಂತರದಲ್ಲಿ ಆಸ್ಟ್ರೇಲಿಯಾ ಮುನ್ನಡೆ ಸಾಧಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









