ಅಶ್ವಿನ್ ಸ್ಪೀನ್ ವ್ಯೂಹಕ್ಕೆ ತತ್ತರಿಸಿದ ಇಂಗ್ಲೆಂಡ್ : 134ಕ್ಕೆ ಸುಸ್ತಾದ ಆಂಗ್ಲರು
ಚೆನ್ನೈ : ಮೊದಲ ಟೆಸ್ಟ್ ಪಂದ್ಯ ಸೋಲಿನ ನೋವಿನಲ್ಲಿದ್ದ ಟೀಂ ಇಂಡಿಯಾ ಸ್ಟ್ರಾಂಗ್ ಕಮ್ ಬ್ಯಾಕ್ ಮಾಡಿದೆ.
ಭಾರತದ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಗೆದ್ದು ಮೆರೆದಾಡಿದ್ದ ಇಂಗ್ಲೆಂಡ್ ಗೆ ಕೊಹ್ಲಿ ಹುಡುಗರು ಮುಟ್ಟಿ ನೋಡಿಕೊಳ್ಳುವಂತಹ ತಿರುಗೇಟು ನೀಡಿದ್ದಾರೆ.
ಚೆಪಾಕ್ ಅಂಗಳದಲ್ಲಿ ಲೋಕಲ್ ಬಾಯ್ ಅಶ್ವಿನ್ ಸ್ಪೀಲ್ ವ್ಯೂಹಕ್ಕೆ ಸಿಲುಕಿದ ಆಂಗ್ಲ ಬ್ಯಾಟ್ಸ್ ಮನ್ ಗಳು ಪೆವಿಲಿಯನ್ ಪರೇಡ್ ನಡೆಸಿ 134 ಆಲ್ ಔಟ್ ಆಗಿದ್ದಾರೆ.
ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ 329 ರನ್ ಗಳಿಗೆ ಆಲೌಟ್ ಆಗಿತ್ತು. ನಂತರ ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 134 ರನ್ ಗಳಿಗೆ ಆಲೌಟ್ ಆಗಿದೆ.
ಇಂಗ್ಲೆಂಡ್ ಪರ ಸಿಬ್ಲಿ 16, ಬೆನ್ ಸ್ಟೋಕ್ಸ್ 18, ಒಲ್ಲಿ ಪೊಪೆ 22, ಬೆನ್ ಪೋಕ್ಸ್ ಅಜೇಯ 42 ರನ್ ಬಾರಿಸಿದ್ದಾರೆ.
ಭಾರತ ಪರ ಬೌಲಿಂಗ್ ನಲ್ಲಿ ಅಶ್ವಿನ್ 5, ಇಶಾಂತ್ ಶರ್ಮಾ ಮತ್ತು ಅಕ್ಷರ್ ಪಟೇಲ್ ತಲಾ 2 ವಿಕೆಟ್ ಪಡೆದಿದ್ದಾರೆ.
ಭಾರತ 195 ರನ್ ಗಳ ಮುನ್ನಡೆ ಪಡೆದುಕೊಂಡು ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು, 42 ರನ್ ಗೆ ಒಂದು ವಿಕೆಟ್ ಕಳೆದುಕೊಂಡಿದೆ. ಗಿಲ್ 14ಕ್ಕೆ ಔಟ್ ಆಗಿದ್ದಾರೆ.
ಶ್ರೀ ಕಟೀಲು ದುರ್ಗಾಪರಮೇಶ್ವರೀ ಕ್ಷೇತ್ರ ದೈವಜ್ಞ ಪ್ರಧಾನ್ ತಾಂತ್ರಿಕ್ ಜ್ಞಾನೇಶ್ವರ್ ರಾವ್ 8548998564
ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಕರೆ ಮಾಡಿ ಸಮಸ್ಯೆ ಏನೇ ಇರಲಿ ಏಷ್ಟೇ ಕಠಿಣವಾಗಿರಲಿ ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ತಪ್ಪದೆ ಕರೆ ಮಾಡಿ 85489 98564
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









