ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಇಂಗ್ಲೆಂಡ್ ತಂಡ ಪ್ರಕಟ
ಟೀಮ್ ಇಂಡಿಯಾ ವಿರುದ್ಧದ ಕೊನೆಯ ಎರಡು ಟೆಸ್ಟ್ ಪಂದ್ಯಗಳಿಗೆ ಪ್ರವಾಸಿ ಇಂಗ್ಲೆಂಡ್ ತಂಡವನ್ನು ಪ್ರಕಟಿಸಲಾಗಿದೆ.
ಚೆನ್ನೈ ನಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿ ಹೀನಾಯ ಸೋತ ಬಳಿಕ ಇಂಗ್ಲೆಂಡ್ ತಂಡದಲ್ಲಿ ಕೆಲವೊಂದು ಬದಲಾವಣೆಯಾಗಿದೆ.
ಆಲ್ ರೌಂಡರ್ ಹಾಗೂ ತಂಡದ ಪ್ರಮುಖ ಸ್ಪಿನ್ನರ್ ಮೋಯಿನ್ ಆಲಿ ಸರಣಿಯಿಂದ ಹೊರನಡೆದಿದ್ದಾರೆ. ಹಾಗೇ ಮೊದಲ ಎರಡು ಟೆಸ್ಟ್ ಪಂದ್ಯಗಳಿಂದ ಹೊರಗುಳಿದಿದ್ದ ವಿಕೆಟ್ ಕೀಪರ್ ಬ್ಯಾಟ್ಸ್ ಮೆನ್ ಜಾನಿ ಬೇಸ್ ಸ್ಟೋವ್ ಮತ್ತು ಮಾರ್ಕ್ ವುಡ್ ಅವರು ತಂಡವನ್ನು ಸೇರಿಕೊಂಡಿದ್ದಾರೆ.
ಇನ್ನೊಂದೆಡೆ, 2ನೇ ಟೆಸ್ಟ್ ಪಂದ್ಯಕ್ಕೆ ವಿಶ್ರಾಂತಿಯಲ್ಲಿದ್ದ ಜೋಸ್ ಬಟ್ಲರ್ ಕೂಡ ಮುಂದಿನ ಎರಡು ಟೆಸ್ಟ್ ಪಂದ್ಯಗಳಿಗೆ ಲಭ್ಯರಿರುವುದಿಲ್ಲ. ಬೆನ್ ಫೋಕ್ಸ್ ಅವರು ವಿಕೆಟ್ ಕೀಪರ್ ಆಗಿ ಮುಂದುವರಿಯಲಿದ್ದಾರೆ.
ಮೂರನೇ ಟೆಸ್ಟ್ ಪಂದ್ಯ ಅಹಮದಾಬಾದ್‍ನ ಮೊಟೇರಾ ಮೈದಾನದಲ್ಲಿ ಫೆಬ್ರವರಿ 24ರಿಂದ ಶುರುವಾಗಲಿದೆ. ಈ ಪಂದ್ಯಕ್ಕೆ ಶೇ. 50 ರಷ್ಟು ಪ್ರೇಕ್ಷಕರಿಗೆ ಪಂದ್ಯ ನೋಡಲು ಅವಕಾಶ ನೀಡಲಾಗಿದೆ. ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಲಿದೆ.
ಅಂದ ಹಾಗೇ ಈ ಪಂದ್ಯ ಹೊನಲು ಬೆಳಕಿನಡಿಯಲ್ಲಿ ಪಿಂಕ್ ಬಾಲ್ ಚೆಂಡಿನಲ್ಲಿ ನಡೆಯಲಿದೆ. ಈಗಾಗಲೇ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ 1-1ರಿಂದ ಸಮಬಲಗೊಂಡಿದೆ. ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಪ್ರವೇಶಿಸಲು ಈ ಎರಡು ಪಂದ್ಯಗಳು ಉಭಯ ತಂಡಗಳಿಗೆ ಮಹತ್ವದ್ದಾಗಿದೆ. ಹೀಗಾಗಿ ಎರಡು ತಂಡಗಳಿಗೂ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ.
ಇಂಗ್ಲೆಂಡ್ ತಂಡ
ಜಾಯ್ ರೂಟ್ (ನಾಯಕ), ಜಾನಿ ಬೇರ್ ಸ್ಟೋವ್, ಜೇಮ್ಸ್ ಆಂಡರ್ಸನ್, ಜೋಫ್ರಾ ಆರ್ಚೆರ್, ಡಾಮಿನಿಕ್ ಬೇಸ್, ಸ್ಟುವರ್ಟ್ ಬ್ರಾಡ್, ರೋರಿ ಬನ್ರ್ಸ್. ಝಾಕ್ ಕ್ರಾಲೆ, ಬೆನ್ ಫೋಕ್ಸ್, ಡಾನ್ ಲಾರೆನ್ಸ್, ಜಾಕ್ ಲೀಚ್, ಒಲಿ ಪೋಪ್, ಡೋಮ್ ಸಿಬ್ಲಿ, ಬೆನ್ ಸ್ಟೋಕ್ಸ್, ಒಲಿ ಸ್ಟೋನ್, ಕ್ರೀಸ್ ವೋಕ್ಸ್, ಮಾರ್ಕ್ ವುಡ್.








