ಮೂರನೇ ಟೆಸ್ಟ್ ಪಂದ್ಯ : ಭಾರತಕ್ಕೆ ಆರಂಭಿಕ ಆಘಾತ
ಲೀಡ್ಸ್ : ಇಂಗ್ಲೆಂಡ್ ವಿರುದ್ಧ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆರಂಭಿಸಿದ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ.
ಕಳೆದ ಎರಡು ಪಂದ್ಯಗಳಲ್ಲಿ ಬೊಂಬಾಟ್ ಪ್ರದರ್ಶನ ನೀಡಿದ್ದ ಕನ್ನಡಿಗ ರಾಹುಲ್, ಶೂನ್ಯಕ್ಕೆ ಔಟ್ ಆಗಿದ್ದಾರೆ.
ಟೀಂ ಇಂಡಿಯಾ ಲಾಡ್ರ್ಸ್ ನಲ್ಲಿ ಗೆಲುವು ಸಾಧಿಸಿದ ತಂಡವನ್ನು ಇಂದಿನ ಪಂದ್ಯದಲ್ಲೂ ಉಳಿಸಿಕೊಂಡಿದೆ.
ಆದರೆ, ಅತಿಥೇಯ ಇಂಗ್ಲೆಂಡ್ ತಂಡ ಎರಡು ಬದಲಾವಣೆ ಮಾಡಿಕೊಂಡಿದೆ. ಆರಂಭಿಕ ಬ್ಯಾಟ್ಸ್ ಮನ್ ಡಾಮ್ ಸಿಬ್ಲೀ ಬದಲಿಗೆ ಡೇವಿಡ್ ಮಲನ್ ಮತ್ತು ವೇಗಿ ಮಾರ್ಕ್ ವುಡ್ ಬದಲಿಗೆ ಕ್ರೇಗ್ ಓವರ್ ಟನ್ ರನ್ನು ಆಯ್ಕೆ ಮಾಡಿದೆ.
ತಂಡಗಳು ಹೀಗಿವೆ :
ಭಾರತ ತಂಡ : ರೋಹಿತ್ ಶರ್ಮಾ, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ನಾಯಕ), ಅಜಿಂಕ್ಯ ರಹಾನೆ, ರಿಷಭ್ ಪಂತ್ (ವಿಕೆಟ್ ಕೀಪರ್) ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಇಂಗ್ಲೆಂಡ್ ತಂಡ: ರೋರಿ ಬನ್ರ್ಸ್, ಹಸೀಬ್ ಹಮೀದ್, ಡೇವಿಡ್ ಮಲನ್, ಜೋ ರೂಟ್ (ನಾಯಕ), ಜಾನಿ ಬೈರ್‍ಸ್ಟೋವ್, ಜೋಸ್ ಬಟ್ಲರ್ (ವಿಕೆಟ್ ಕೀಪರ್?), ಮೊಯೀನ್ ಅಲಿ, ಸ್ಯಾಮ್ ಕರ್ರನ್, ಕ್ರೇಗ್ ಓವರ್‍ಟನ್, ಆಲ್ಲಿ ರಾಬಿನ್ಸನ್, ಜೇಮ್ಸ್ ಆಂಡರ್ಸನ್









