India vs New zealand Series : T20 ಗೆ ಪೃಥ್ವಿಶಾ, ಟೆಸ್ಟ್ ಗೆ ಅವಕಾಶ ಗಿಟ್ಟಿಸಿಕೊಂಡ ಸೂರ್ಯ…
ನ್ಯೂಜಿಲೆಂಡ್ ವಿರುದ್ಧದ ಏಕದಿನ ಮತ್ತು ಟಿ20 ಸರಣಿಗೆ ಭಾರತ ತಂಡವನ್ನ ಬಿಸಿಸಿಐ ಪ್ರಕಟಿಸಿದೆ. ಇತ್ತೀಚೆಗಷ್ಟೇ ರಣಜಿ ಪಂದ್ಯದಲ್ಲಿ 379 ರನ್ ಗಳಿಸಿ ತ್ರಿಶತಕ ಸಿಡಿಸಿದ್ದ ಪೃಥ್ವಿ ಶಾ ಟಿ 20 ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಏಕದಿನ ತಂಡದಲ್ಲಿ ಹಿರಿಯ ಆಟಗಾರರಿಗೆ ಮಣೆ ಹಾಕಿದ್ದು, T20 ಸರಣಿಯಲ್ಲಿ ಬಹುತೇಕ ಯುವಕರಿಗೆ ಅವಕಾಶ ನೀಡಲಾಗಿದೆ. ರೋಹಿತ್ ಶರ್ಮಾ ಏಕದಿನ ತಂಡದ ನಾಯಕರಾಗಿದ್ದರೆ, ಹಾರ್ದಿಕ್ ಪಾಂಡ್ಯ ಟಿ20 ತಂಡದ ನಾಯಕರಾಗಿ ಮುಂದುವರೆದಿದ್ದಾರೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದಲ್ಲಿ ಹೆಚ್ಚಿನ ಬದಲಾವಣೆಗಳನ್ನ ಮಾಡಲಾಗಿಲ್ಲ. ಆದರೆ, ವೈಯಕ್ತಿಕ ಕಾರಣಗಳಿಂದ ಕೆಎಲ್ ರಾಹುಲ್ ಮತ್ತು ಅಕ್ಷರ್ ಪಟೇಲ್ ತಂಡಕ್ಕೆ ಆಯ್ಕೆಯಾಗಿರಲಿಲ್ಲ. ಶಹಬಾಜ್ ಅಹ್ಮದ್ ಮತ್ತು ವಾಷಿಂಗ್ಟನ್ ಸುಂದರ್ ಆಲ್ ರೌಂಡ್ ಆಟಗಾರರಾಗಿ ಸ್ಥಾನ ಪಡೆದರೇ ಆಂಧ್ರದ ವಿಕೆಟ್ ಕೀಪರ್ ಕೆಎಸ್ ಭರತ್ ನ್ಯೂಜಿಲೆಂಡ್ ವಿರುದ್ಧದ ಏಕದಿನ ತಂಡದಲ್ಲಿ ಅವಕಾಶ ಗಿಟ್ಟಿಸಿದ್ದಾರೆ.
ಇನ್ನೂ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಅವರನ್ನ ಟಿ 20 ತಂಡದಲ್ಲಿ ಸೇರಿಸಿಕೊಂಡಿಲ್ಲ. ಬಿಸಿಸಿಐ ಅವರಿಗೆ ವಿಶ್ರಾಂತಿ ನೀಡಿ ಪೃಥ್ವೀಶಾಗೆ ಅವಕಾಶ ಕಲ್ಪಿಸಿದೆ. ಅದೇ ರೀತಿ ಫೆಬ್ರವರಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಭಾಗವಾಗಿ ಬಿಸಿಸಿಐ ಎರಡು ಟೆಸ್ಟ್ ಪಂದ್ಯಗಳಿಗೆ ತಂಡವನ್ನು ಪ್ರಕಟಿಸಿದೆ. ಏಕದಿನ ಹಾಗೂ ಟಿ20 ಮಾದರಿಯಲ್ಲಿ ಎದುರಾಳಿ ತಂಡದ ಬೌಲರ್ ಗಳ ಮೇಲೆ ದಾಳಿ ನಡೆಸುತ್ತಿರುವ ಸೂರ್ಯಕುಮಾರ್ ಯಾದವ್ ಗೆ ಟೆಸ್ಟ್ ತಂಡದಲ್ಲಿ ಅವಕಾಶ ಸಿಕ್ಕಿದೆ.
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ); ಶಬ್ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ ಉಮ್ರಾನ್ ಮಲಿಕ್.
ನ್ಯೂಜಿಲೆಂಡ್ ವಿರುದ್ಧ ಟಿ20 ಸರಣಿಗೆ ಭಾರತ ತಂಡ
ಹಾರ್ತಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ರಿತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜ್ವೇಂದ್ರ ಸಿಂಗ್ ಚಾಹಲ್, ಅರ್ಷದೀಪ್ ಸಿಂಗ್ ಉಮ್ರಾನ್ ಮಲಿಕಾ, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್.
ಭಾರತ ಪ್ರವಾಸದ ಭಾಗವಾಗಿ ನ್ಯೂಜಿಲೆಂಡ್ ತಂಡ ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳನ್ನು ಆಡಲಿದೆ.
ಮೊದಲ ODI ಜನವರಿ 18 (ಹೈದರಾಬಾದ್)
ಎರಡನೇ ODI ಜನವರಿ 21 ರಂದು (ರಾಯಪುರ)
3ನೇ ODI ಜನವರಿ 24 ರಂದು (ಇಂಧೋರ್)
ಜನವರಿ 27 ರಂದು (ರಾಂಚಿ) ಮೊದಲ ಟಿ20 ಪಂದ್ಯ
2ನೇ ಟಿ20 ಪಂದ್ಯ ಜನವರಿ 29 (ಲಕ್ನೋ)
3ನೇ ಟಿ20 ಪಂದ್ಯ ಫೆಬ್ರವರಿ 1 ರಂದು (ಅಹಮದಾಬಾದ್)
ಭಾರತ vs ಆಸ್ಟ್ರೇಲಿಯಾ ಟೆಸ್ಟ್ ಸರಣಿ
ಫೆಬ್ರವರಿ 9 ರಿಂದ 13 ರವರೆಗೆ ಮೊದಲ ಟೆಸ್ಟ್ ಪಂದ್ಯ
ಫೆಬ್ರವರಿ 17 ರಿಂದ 21 ರವರೆಗೆ ಎರಡನೇ ಟೆಸ್ಟ್ ಪಂದ್ಯ
ಮಾರ್ಚ್ 1 ರಿಂದ 5 ರವರೆಗೆ ಮೂರನೇ ಟೆಸ್ಟ್ ಪಂದ್ಯ
ಮಾರ್ಚ್ 9 ರಿಂದ 13 ರವರೆಗೆ ನಾಲ್ಕನೇ ಟೆಸ್ಟ್ ಪಂದ್ಯ
India vs New Zealand Series: Prithvisha for T20, Surya gets chance for Test…