T20 world cup: ಮಳೆಗೆ ರದ್ದುಗೊಂಡ ಭಾರತ ಮತ್ತು ನ್ಯೂಜಿಲೆಂಡ್ ಅಭ್ಯಾಸ ಪಂದ್ಯ…
ಬ್ರಿಸ್ಬೇನ್‌ನಲ್ಲಿ ಸತತ ಮಳೆಯಿಂದಾಗಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಭ್ಯಾಸ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಮೊದಲ ಅಭ್ಯಾಸ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯವನ್ನು ಸೋಲಿಸಿದ ಟೀಂ ಇಂಡಿಯಾ, ಮೊದಲ ಪಂದ್ಯದಲ್ಲಿ ಅವಕಾಶ ಸಿಗದ ಆಟಗಾರರಿಗೆ ಅವಕಾಶ ನೀಡಲು ಹೊರಟಿತ್ತು.
ಕಿವೀಸ್ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಅನುಭವಿಸಿತ್ತು.
ಇನ್ನೂ ತಂಡದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಸುಮಾರು ಒಂದು ವರ್ಷದ ನಂತರ ತಂಡಕ್ಕೆ ಮರಳಿದ್ದಾರೆ. ಖುಷಿಯ ಸಂಗತಿಯೆಂದರೇ ಅವರು ಉತ್ತಮ ಲಯದಲ್ಲಿರುವಂತೆ ತೋರುತ್ತಿದೆ. ಶಮಿ ಕೊನೆಯ ಓವರ್‌ನಲ್ಲಿ 4 ಎಸೆತಗಳಲ್ಲಿ 3 ವಿಕೆಟ್ ಪಡೆಯುವ ಮೂಲಕ ಆಸ್ಟ್ರೇಲಿಯಾ ವಿರುದ್ಧದ ಪಂದ್ಯಕ್ಕೆ ತಿರುವು ನೀಡಿದರು. ಆಸ್ಟ್ರೇಲಿಯನ್ ನೆಲದಲ್ಲಿ ಉತ್ತಮ ಪ್ರದರ್ಶನ ನೀಡಲು ಸಿದ್ದರಾಗಿದ್ದಾರೆ.
ಭಾರತ ತಂಡ ಅಕ್ಟೋಬರ್ 23 ರಂದು ಪಾಕಿಸ್ತಾನ ವಿರುದ್ಧದ ಪಂದ್ಯವನ್ನ ಆಡಲಿದೆ. 2021ರ ಟಿ 20 ವಿಶ್ವಕಪ್‌ನಲ್ಲಿ ಭಾರತ ತಂಡವನ್ನು 10 ವಿಕೆಟ್‌ಗಳಿಂದ ಸೋಲಿಸಿತ್ತು. ಇದೀಗ ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಟೀಂ ಇಂಡಿಯಾ ಮುಂದಾಗಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 22 ರಂದು ಸಿಡ್ನಿಯಲ್ಲಿ ಆಡಲಿದೆ.
T20 world cup: India Vs New Zealand T20 World Cup Warm Up Match








