India vs NZ 3rd ODI : ಟಾಸ್ ಸೋತು ಬ್ಯಾಟಿಂಗ್ ಇಳಿದ ಭಾರತ : ವೈಟ್ ವಾಷ್ ಮಾಡುವ ತವಕ…
ಭಾರತ-ನ್ಯೂಜಿಲೆಂಡ್ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯ ಇಂದೋರ್ನ ಹೋಲ್ಕರ್ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ನ್ಯೂಜಿಲೆಂಡ್ ಟೀಂ ಇಂಡಿಯಾವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿದೆ.
ಮೊದಲು ಬ್ಯಾಟ್ ಮಾಡುತ್ತಿರುವ ಭಾರತ 15 ಓವರ್ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 128 ರನ್ ಗಳಿಸಿತು. ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಕ್ರೀಸ್ನಲ್ಲಿದ್ದಾರೆ. ಗಿಲ್ ತಮ್ಮ ವೃತ್ತಿ ಜೀವನದ ಆರನೇ ಅರ್ಧಶತಕ ಗಳಿಸಿದ್ದಾರೆ. ರೋಹಿತ್ ಶರ್ಮಾ 49ನೇ ಅರ್ಧಶತಕ ದಾಖಲಿಸಿದ್ದಾರೆ. ಟೀಂ ಇಂಡಿಯಾಕ್ಕೆ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್ ಗಿಲ್ ಬಲಿಷ್ಠ ಆರಂಭ ನೀಡಿ 100ಕ್ಕೂ ಹೆಚ್ಚು ರನ್ ಗಳ ಜೊತೆಯಾಟ ಪೂರೈಸಿದ್ದಾರೆ.
ನಾಯಕ ರೋಹಿತ್ ಶರ್ಮಾ ಏಕದಿನದಲ್ಲಿ ಪೂರ್ಣಾವಧಿ ಆರಂಭಿಕ ಆಟಗಾರರಾಗಿ 10 ವರ್ಷಗಳನ್ನ ಪೂರೈಸಿದ್ದಾರೆ. ಆರಂಭಿಕ ಆಟಗಾರನಾಗಿ 55.93 ಸರಾಸರಿ ಮತ್ತು 92.71 ಸ್ಟ್ರೈಕ್ ರೇಟ್ನಲ್ಲಿ 7663 ರನ್ ಗಳಿಸಿದ್ದಾರೆ. ಕ್ಯಾಪ್ಟನ್ ರೋಹಿತ್ ಶರ್ಮಾ ತಂಡದಲ್ಲಿ ಎರಡು ಬದಲಾವಣೆ ಮಾಡಿದ್ದು, ವೇಗಿ ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಬದಲಿಗೆ ಉಮ್ರಾನ್ ಮಲಿಕ್ ಮತ್ತು ಚಹಾಲ್ಗೆ ಅವಕಾಶ ನೀಡಿದ್ದಾರೆ. ನ್ಯೂಜಿಲ್ಯಾಂಡ್ ಪರ ನಾಯಕ ಟಾಮ್ ಲ್ಯಾಥಮ್ ಶಿಪ್ಲಿ ಬದಲಿಗೆ ಡಫಿ ಪಿಚ್ ಗೆ ಇಳಿದಿದ್ದಾರೆ.
ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ರೀತಿ ಇದೆ…
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್, ಕುಲದೀಪ್ ಯಾದವ್ ಮತ್ತು ಯುಜ್ವೇಂದ್ರ ಚಾಹಲ್.
ನ್ಯೂಜಿಲೆಂಡ್: ಡ್ವೇನ್ ಕಾನ್ವೇ, ಫಿನ್ ಅಲೆನ್, ಹೆನ್ರಿ ನಿಕೋಲ್ಸ್, ಡೇರಿಲ್ ಮಿಚೆಲ್, ಟಾಮ್ ಲ್ಯಾಥಮ್, ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್ವೆಲ್, ಲಾಕ್ ಫರ್ಗುಸನ್, ಜಾಕೋಬ್ ಡಫಿ, ಮಿಚೆಲ್ ಸ್ಯಾಂಟ್ನರ್, ಬ್ಲೇರ್ ಟೆಕ್ನರ್.
India vs NZ 3rd ODI: India lost the toss and went into bat: