RSA vs IND test match : ಭಾರತಕ್ಕೆ ಆರಂಭಿಕ ಆಘಾತ, ಓಪನರ್ಸ್ ಔಟ್
ಕೇಪ್ ಟೌನ್ ನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ. ಅನ್ ಫಾರ್ಮ್ ಆಟಗಾರರಾದ ಕೆ.ಎಲ್.ರಾಹುಲ್, ಮಯಾಂಕ್ ಅಗರ್ ವಾಲ್ ಬ್ಯಾಕ್ ಟು ಬ್ಯಾಕ್ ವಿಕೆಟ್ ಒಪ್ಪಿಸಿದ್ದಾರೆ.
ಪಂದ್ಯದಲ್ಲಿ ಟೀಂ ಇಂಡಿಯಾ ಟಾಸ್ ವಿನ್ ಆಗಿ ಮೊದಲು ಬ್ಯಾಟಿಂಗ್ ಮಾಡಿತು. ಕನ್ನಡಗರಾದ ಕೆ.ಎಲ್.ರಾಹುಲ್ ಮತ್ತು ಮಯಾಂಕ ಅಗರ್ ವಾಲ್ ಇನ್ನಿಂಗ್ಸ್ ಓಪನ್ ಮಾಡಿದ್ರು. 12 ರನ್ ಗಳಿಸಿ ರಾಹುಲ್, ಒಲಿವಿಯರ್ ಗೆ ವಿಕೆಟ್ ಒಪ್ಪಿಸಿದ್ದಾರೆ. 15 ರನ್ ಗಳಿಗೆ ಮಯಾಂಕ್ ರಬಾಡ ಬಲೆಗೆ ಬಿದ್ದಿದ್ದಾರೆ.
ಇನ್ನು ವಿರಾಟ್ ಆಗಮನದಿಂದಾಗಿ ಹನುಮವಿಹಾರ ಅವಕಾಶ ಕಳೆದುಕೊಂಡಿದ್ದಾರೆ. ಇನ್ನು ಗಾಯಗೊಂಡಿರುವ ಮೊಹಮ್ಮದ್ ಸಿರಾಜ್ ಬದಲಿಗೆ ಉಮೇಶ್ ಯಾದವ್ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಗಳು ನಡೆದಿಲ್ಲ.
ತಂಡಗಳು
ಭಾರತ (ಪ್ಲೇಯಿಂಗ್ XI): ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ(ಸಿ), ಅಜಿಂಕ್ಯ ರಹಾನೆ, ರಿಷಬ್ ಪಂತ್(ಕೀಪರ್), ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಉಮೇಶ್ ಯಾದವ್
ದಕ್ಷಿಣ ಆಫ್ರಿಕಾ : ಡೀನ್ ಎಲ್ಗರ್ (ಸಿ), ಐಡೆನ್ ಮಾರ್ಕ್ರಾಮ್, ಕೀಗನ್ ಪೀಟರ್ಸನ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಟೆಂಬಾ ಬವುಮಾ, ಕೈಲ್ ವೆರ್ರೆನ್ನೆ (ಕೀಪರ್), ಮಾರ್ಕೊ ಜಾನ್ಸೆನ್, ಕಗಿಸೊ ರಬಾಡಾ, ಕೇಶವ್ ಮಹಾರಾಜ್, ಡುವಾನ್ನೆ ಒಲಿವಿಯರ್, ಲುಂಗಿ ಎನ್ಗಿಡಿ