India vs Srilanka : ಏಕದಿನ ಸರಣಿಯಿಂದಲೂ ಹೊರಬಿದ್ದ ಜಸ್ಪ್ರೀತ್ ಬುಮ್ರಾ….
ಶ್ರೀಲಂಕಾ ಮತ್ತು ಭಾರತ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ನಾಳೆಯಿಂದ ಆರಂಭವಾಗಲಿದೆ. ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ಮಧ್ಯಾಹ್ನ 1.30ಕ್ಕೆ ಆರಂಭವಾಗಲಿದೆ. ಟಿ20 ಸರಣಿ ಗೆದ್ದ ಸಂಭ್ರಮದಲ್ಲಿ ಟೀಂ ಇಂಡಿಯಾ ಏಕದಿನ ಅಂಗಳಕ್ಕೆ ಕಾಲಿಡುತ್ತಿದ್ದರೆ, ಶ್ರೀಲಂಕಾ ಆಟಗಾರರು ಏಕದಿನ ಸರಣಿ ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಇದರೊಂದಿಗೆ ನಾಳಿನ ಉದ್ಘಾಟನಾ ಪಂದ್ಯ ರೋಚಕವಾಗಲಿದೆ ಎಂದು ಕ್ರಿಕೆಟ್ ಅಭಿಮಾನಿಗಳು ನಿರೀಕ್ಷಿಸುತ್ತಿದ್ದಾರೆ.
ಟಿ20 ಸರಣಿಯಲ್ಲಿ ಹೆಚ್ಚಾಗಿ ಯುವ ಆಟಗಾರರಿಗೆ ಅವಕಾಶ ನೀಡಲಾಗಿತ್ತು. ಏಕದಿನಕ್ಕೆ ಅನುಭವಿ ಆಟಗಾರರು ಮರಳಿ ಬರುತ್ತಿದ್ದಾರೆ. ಕೊಹ್ಲಿ, ರೋಹಿತ್, ಬುಮ್ರಾ ಮತ್ತು ಶಮಿಯಂತಹ ಆಟಗಾರರು ನಾಳೆಯ ಪಂದ್ಯದಲ್ಲಿ ಆಡಲಿದ್ದಾರೆ. ಆದರೇ ಪಂದ್ಯ ಆರಂಭಕ್ಕೂ ಮುನ್ನ ಟೀಂ ಇಂಡಿಯಾ ತೀವ್ರ ಹಿನ್ನಡೆ ಅನುಭವಿಸುತ್ತಿದೆ. ಭಾರತದ ವೇಗದ ಬೌಲರ್ ಬುಮ್ರಾ ಗಾಯದ ಸಮಸ್ಯೆಯಿಂದಾಗಿ ಏಕದಿನ ಸರಣಿಯಿಂದ ಹೊರಗುಳಿದಿದ್ದಾರೆ. ಟೀಂ ಇಂಡಿಯಾ ಆಟಗಾರರೆಲ್ಲರೂ ಗುವಾಹಟಿ ತಲುಪಿದ್ದಾರೆ ಆದರೆ ಬುಮ್ರಾ ಗುವಾಹಟಿ ತಲುಪಲಿಲ್ಲ.
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ಬುಮ್ರಾ ಅವರನ್ನ ಆಯ್ಕೆಗಾರರು ಆಯ್ಕೆ ಮಾಡಿದ್ದರು. ಜಸ್ಪ್ರೀತ್ ಬುಮ್ರಾ ಅವರು ಫಿಟ್ ಆಗಿದ್ದಾರೆ ಎಂದು ಭಾವಿಸಿದ ಆಯ್ಕೆಗಾರರು ಏಕದಿನ ಸರಣಿಗೆ ಅವರನ್ನು ಆಯ್ಕೆ ಮಾಡಿದ್ದರು. ಆದರೆ ಬುಮ್ರಾ ಗಾಯದಿಂದ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ ಎಂದು ತೋರುತ್ತದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಮತ್ತು ಏಕದಿನ ವಿಶ್ವಕಪ್ ಗಮನದಲ್ಲಿಟ್ಟುಕೊಂಡು ಯಾವುದೇ ರಿಸ್ಕ್ ತೆಗೆದುಕೊಳ್ಳಲು ಬಯಸದ ಬಿಸಿಸಿಐ ಕೊನೆಯ ಕ್ಷಣದಲ್ಲಿ ಬುಮ್ರಾ ಅವರನ್ನು ಸರಣಿಯಿಂದ ಹೊರಗಿಟ್ಟಿದೆಯಂತೆ. ಬುಮ್ರಾ ಕಳೆದ ವರ್ಷ ಸೆಪ್ಟೆಂಬರ್ 22 ರಿಂದ ಏಕದಿನ ಕ್ರಿಕೆಟ್ನಿಂದ ದೂರವಿದ್ದಾರೆ.
India vs Sri Lanka: Jasprit Bumrah out of ODI series…