ಪಾಕಿಸ್ತಾನದ ಕೋರ್ಟ್ ಜಮ್ಮ-ಕಾಶ್ಮೀರದ ಭಾಗ ಗಿಲ್ಗಿಟ್-ಬಾಲ್ಟಿಸ್ತಾನಕ್ಕೆ ಸಂಬಂಧಿಸಿದಂತೆ ನೀಡಿರುವ ತೀರ್ಪಿಗೆ ಭಾರತ ತನ್ನ ತೀವ್ರ ಆಕ್ಷೇಪವನ್ನು ವ್ಯಕ್ತಪಡಿಸಿದೆ. ಅಲ್ಲದೆ ಜಮ್ಮ-ಕಾಶ್ಮೀರ ಮತ್ತು ಲಡಾಖ್ ನ ಭಾಗವಾಗಿರುವ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಗಳನ್ನು ಪಾಕಿಸ್ತಾನ ಕೂಡಲೇ ತೆರವುಗೊಳಿಸಬೇಕು ಎನ್ನುವ ಎಚ್ಚರಿಕೆಯನ್ನೂ ನೀಡಿದೆ.
ಭಾರತದ ವಿದೇಶಾಂಗ ಸಚಿವಾಲಯ ಈ ಸಂಬಂಧ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನದ ಹಿರಿಯ ರಾಯಭಾರಿಯನ್ನು ಕರೆಸಿಕೊಂಡು ಮಾತನಾಡಿಸಿದೆ.
ಪಾಕಿಸ್ತಾನದ ರಾಯಭಾರಿಯಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶಗಳಿಗೆ ಸಂಬಂಧಿಸಿದಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಕೊಟ್ಟಿರುವಂತಹ ತೀರ್ಪಿನ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ವಿದೇಶಾಂಗ ಸಚಿವಾಲಯವು ಗಿಲ್ಗಿಟ್-ಬಾಲ್ಟಿಸ್ತಾನ ಪ್ರದೇಶವು ಜಮ್ಮು-ಕಾಶ್ಮೀರ, ಲಡಾಕ್ನ ಸಂಪೂರ್ಣ ಭೌಗೋಳಿಕ ವ್ಯಾಪ್ತಿಯಲ್ಲೇ ಬರುತ್ತದೆ ಎಂಬುದನ್ನು ಸ್ಪಷ್ಟ ಪಡಿಸಿದೆ. ಅಲ್ಲದೆ ಈ ಪ್ರದೇಶಗಳ ಮೇಲಿನ ಸಂಪೂರ್ಣ ಹಕ್ಕು ಮತ್ತು ಒಡೆತನವು ಭಾರತಕ್ಕೆ ಮಾತ್ರ ಸೇರಿದ್ದು ಎಂಬುದನ್ನು ಸ್ಪಷ್ಟವಾಗಿ ತಿಳಿಸಿದೆ.
ಪಾಕ್ ಆಕ್ರಮಿತ ಪ್ರದೇಶದಲ್ಲಿ ಸಾರ್ವತ್ರಿಕ ಚುನಾವಣೆ ನಡೆಸುವಂತೆ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಆದೇಶವನ್ನು ನೀಡಿದ್ದು, ಈ ವ್ಯಾಪ್ತಿಯಲ್ಲಿ ಗಿಲ್ಗಿಟ್-ಬಾಲ್ಟಿಸ್ತಾನವನ್ನೂ ಕೂಡಾ ಸೇರಿಸಲಾಗಿದೆ. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತ, ಪಾಕ್ ಸರ್ಕಾರವು ಕಳೆದ ಎಪ್ಪತ್ತು ವರ್ಷಗಳಿಂದಲೂ ಅಕ್ರಮವಾಗಿ ಜಮ್ಮು-ಕಾಶ್ಮೀರದ ಕೆಲವು ಭೂಪ್ರದೇಶವನ್ನು ತನ್ನ ಹಿಡಿತಕ್ಕೆ ತೆಗೆದುಕೊಂಡಿದ್ದು, ಅಲ್ಲಿ ನಡೆಸುತ್ತಿರುವ ದೌರ್ಜನ್ಯವನ್ನು ನಿಲ್ಲಿಸಬೇಕು ಎಂದು ಸೂಚನೆ ನೀಡುವ ಜೊತೆಗೆ ಅಲ್ಲಿನ ಎಲ್ಲಾ ನೆಲೆಗಳನ್ನು ತೆರವು ಮಾಡಿ, ಅದನ್ನು ಭಾರತಕ್ಕೆ ಬಿಟ್ಟು ಕೊಡುವಂತೆ ತಾಕೀತು ಮಾಡಿದೆ.
ವಿದ್ಯುತ್ ತಂತಿ ಮೇಲೆ ಬಿದ್ದ ಪ್ರವಾಸಿ ಬಸ್ ದುರಂತ
ಪ್ರವಾಸಿಗರನ್ನು ಹೊತ್ತುಕೊಂಡು ಸಾಗುತ್ತಿದ್ದ ಬಸ್ ಉತ್ತರ ಇಟಲಿಯ ವೆನಿಸ್ ಹತ್ತಿರದ ಮೇಲ್ಸೇತುವೆಯಿಂದ ಉರುಳಿ ಬಿದ್ದ ಪರಿಣಾಮ 21 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ. ಇಟಲಿಯ ವೆನಿಸ್ ಹತ್ತಿರ...