ನವದೆಹಲಿ: ಸ್ವಾತಂತ್ರ್ಯ ದಿನಾಚರಣೆಯ (Independence Day) ಮುನ್ನಾದಿನ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು (President Droupadi Murmu)ದೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಭಾರತವು ಈಗ ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಕೆಲವೇ ವರ್ಷಗಳಲ್ಲಿ ವಿಶ್ವದ ಮೂರು ದೊಡ್ಡ ಆರ್ಥಿಕತೆಗಳಲ್ಲಿ ಒಂದಾಗಲು ಸಿದ್ಧವಾಗಿದೆ ಎಂಬುವುದೇ ಹೆಮ್ಮೆ. ಈ ಯಶಸ್ಸು ರೈತರು ಮತ್ತು ಕಾರ್ಮಿಕರ ಕಠಿಣ ಪರಿಶ್ರಮ, ಉದ್ಯಮಿಗಳ ದೂರದೃಷ್ಟಿ ಮತ್ತು ದೇಶದ ದೂರದೃಷ್ಟಿಯ ನಾಯಕತ್ವದ ಫಲಿತಾಂಶವಾಗಿದೆ ಎಂದು ಹೇಳಿದ್ದಾರೆ.
2021 ಮತ್ತು 2024 ರ ನಡುವೆ ಸರಾಸರಿ ಶೇ. 8ರಷ್ಟು ವಾರ್ಷಿಕ ಬೆಳವಣಿಗೆಯೊಂದಿಗೆ ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ. ಬಡವರ ಸಂಖ್ಯೆಯಲ್ಲಿ ಭಾರೀ ಇಳಿಕೆಯಾಗಿದೆ. ಬಜೆಟ್ನಲ್ಲಿ (Budget) ಪ್ರಕಟಿಸಿದ ಇಂಟರ್ನ್ಶಿಪ್ ಯೋಜನೆಯನ್ನು ಶ್ಲಾಘಿಸಿದ ರಾಷ್ಟ್ರಪತಿಗಳು, ಇದು ದೇಶಾದ್ಯಂತ 1 ಕೋಟಿಗೂ ಹೆಚ್ಚು ಯುವಕರಿಗೆ ಕೆಲಸದ ಅನುಭವ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿ, ಮೋದಿ ಸರ್ಕಾರವನ್ನು ಹೊಗಳಿದ್ದಾರೆ.