ನಿಧಾನಗತಿ ಬೌಲಿಂಗ್ : ಭಾರತ ಮಹಿಳಾ ತಂಡಕ್ಕೆ ದಂಡ
ಹೋವ್ : ಇಂಗ್ಲೆಂಡ್ ತಂಡದ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಭಾರತ ಮಹಿಳಾ ತಂಡಕ್ಕೆ ಐಸಿಸಿ ಪಂದ್ಯದ ಸಂಭಾವನೆಯ ಶೇ. 20ರಷ್ಟು ದಂಡ ಹಾಕಿದೆ.
ಇಂಗ್ಲೆಂಡ್ ವಿರುದ್ಧ ನಡೆದ ಎರಡನೇ ಟಿ-20 ಪಂದ್ಯದಲ್ಲಿ ಹರ್ಮನ್ ಪ್ರೀತ್ ಕೌರ್ ಬಳಗ 8 ರನ್ ಗಳ ರೋಚಕ ಗೆಲುವು ದಾಖಲು ಮಾಡಿದೆ.
ಆದರೆ ಈ ವೇಳೆ ನಿಧಾನಗತಿ ಬೌಲಿಂಗ್ ಮಾಡಿದ್ದಕ್ಕಾಗಿ ಭಾರತದ ವನಿತೆಯರ ತಂಡಕ್ಕೆ ದಂಡ ವಿಧಿಸಲಾಗಿದೆ.
ಇನ್ನು ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4ವಿಕೆಟ್ ನಷ್ಟಕ್ಕೆ 148ರನ್ ಗಳಿಸಿತ್ತು.
ಇದರ ಬೆನ್ನತ್ತಿದ್ದ ಇಂಗ್ಲೆಂಡ್ ತಂಡ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 140ರನ್ ಮಾತ್ರ ಗಳಿಸಲು ಶಕ್ತವಾಯಿತು.
ಮೂರು ಪಂದ್ಯಗಳ ಟಿ 20 ಸರಣಿಯಲ್ಲಿ ಸದ್ಯ ಉಭಯ ತಂಡಗಳು ತಲಾ 1-1 ಪಂದ್ಯ ಗೆದ್ದುಕೊಂಡಿವೆ.
ನಾಳೆ ಅಂತಿಮ ಪಂದ್ಯ ನಡೆಯಲಿದ್ದು, ಪ್ರಶಸ್ತಿಗೆ ಮುತ್ತಿಡುವವರು ಯಾರು ಎಂದು ಗೊತ್ತಾಗಲಿದೆ.