ನವದೆಹಲಿ: ಬಾಂಗ್ಲಾದೇಶದ ವಿರುದ್ಧ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ.
ಬಾಂಗ್ಲಾ ವಿರುದ್ಧ 86 ರನ್ಗಳ ಜಯ ಗಳಿಸಿದ ಟೀಂ ಇಂಡಿಯಾ 3 ಪಂದ್ಯಗಳ ಟಿ20 ಸರಣಿಯನ್ನು 2-0 ರಿಂದ ಕೈವಶ ಮಾಡಿಕೊಂಡಿದೆ.
ಎರಡನೇ ಟಿ20 ಪಂದ್ಯದಲ್ಲಿ ಭಾರತ 86 ರನ್ಗಳಿಂದ ಬಾಂಗ್ಲಾದೇಶವನ್ನು ಸೋಲಿಸಿ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಪರ ಅಭಿಷೇಕ್ ಶರ್ಮಾ,ಸಂಜು ಸ್ಯಾಮ್ಸನ್ ಮತ್ತು ನಾಯಕ ಸೂರ್ಯಕುಮಾರ್ ಯಾದವ್ ಅವರ ವಿಕೆಟ್ಗಳನ್ನು ಕಳೆದುಕೊಂಡಿತು. ಹೀಗಾಗಿ ಭಾರತ ಸಂಕಷ್ಟಕ್ಕೆ ಸಿಲುಕಿತ್ತು. ಈ ವೇಳೆ ಜೊತೆಯಾದ ನಿತೀಶ್ ರೆಡ್ಡಿ ಮತ್ತು ರಿಂಕು ಸಿಂಗ್ ಬಾಂಗ್ಲಾದೇಶದ ಬೌಲರ್ಗಳ ಮೇಲೆ ದಾಳಿ ಮಾಡದರು. ನಿತೀಶ್ ರೆಡ್ಡಿ 28 ಎಸೆತಗಳಲ್ಲಿ ಅರ್ಧಶತಕ ದಾಖಲಿಸಿದರೆ, ರಿಂಕು 27 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು.
ಎರಡನೇ ಟಿ20 ಪಂದ್ಯವನ್ನಾಡಿದ ನಿತೀಶ್ ರೆಡ್ಡಿ ಭರ್ಜರಿ ಬ್ಯಾಟಿಂಗ್ ಮಾಡಿ 7 ಸಿಕ್ಸರ್ ಹಾಗೂ 4 ಬೌಂಡರಿ ಸಹಿತ ಕೇವಲ 34 ಎಸೆತಗಳಲ್ಲಿ 74 ರನ್ ಗಳಿಸಿದರು. ರಿಂಕು ಜೊತೆಗೆ ಶತಕದ ಜೊತೆಯಾಟ ನಡೆಸಿದರು. ರಿಂಕು ಸಿಂಗ್ ಕೂಡ 26 ಎಸೆತಗಳಲ್ಲಿ ಅರ್ಧಶತಕ ಗಳಿಸುವ ಮೂಲಕ ಬಾಂಗ್ಲಾದೇಶಕ್ಕೆ ಆಘಾತ ನೀಡಿದರು. ಪರಿಣಾಮವಾಗಿ ಭಾರತ ತಂಡ