ಪ್ಯಾರಿಸ್: ಪ್ಯಾರಿಸ್ ಪ್ಯಾರಾಲಿಂಪಿಕ್ಸ್ (Paris Paralympics) ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ. 2ನೇ ದಿನ ಭಾರತೀಯ (India) ಕ್ರೀಡಾಪಟುಗಳು 4 ಪದಕಗಳಿಗೆ ಕೊರಳೊಡ್ಡಿದ್ದಾರೆ. ಶೂಟಿಂಗ್‌ನಲ್ಲಿ ಮೂರು ಪದಕಗಳು ಹಾಗೂ 100 ಮೀಟರ್ ರಿಲೇ ವಿಭಾಗದಲ್ಲಿ 1 ಪದಕ ಭಾರತದ ಪಾಲಾಗಿದೆ.
ಮಹಿಳೆಯರ 10 ಮೀಟರ್ ಏರ್ ರೈಫಲ್ SH1 ವಿಭಾಗದ ಫೈನಲ್ ಶೂಟರ್ ಅವನಿ ಲೆಖರಾ ಮತ್ತು ಮೋನಾ ಅಹರ್ವಾಲ್ ಕ್ರಮವಾಗಿ ಚಿನ್ನ ಮತ್ತು ಕಂಚಿನ ಪದಕ ಗೆದ್ದಿದ್ದಾರೆ. ನಂತರ ಚಟೌರೊಕ್ಸ್‌ನಲ್ಲಿ ನಡೆದ ಪುರುಷರ 10 ಮೀಟರ್ ಏರ್ ಪಿಸ್ತೂಲ್ (SH1) ವಿಭಾಗದಲ್ಲಿ ಶೂಟರ್ ಮನೀಷ್ ನರ್ವಾಲ್ ಬೆಳ್ಳಿ ಪದಕ ಗೆದ್ದಿದ್ದಾರೆ. ತೀವ್ರ ಪೈಪೋಟಿ ನೀಡಿದ್ದ ನರ್ವಾಲ್ 2+ ಪಾಯಿಂಟ್‌ಗಳ ಅಂತರದಲ್ಲಿ ಚಿನ್ನದ ಪದಕದಿಂದ ವಂಚಿತರಾದರು.
ಮಹಿಳೆಯರ 100 ಮೀ-ಟಿ 35 ಫೈನಲ್‌ನಲ್ಲಿ ಪ್ರೀತಿ ಪಾಲ್ (Preethi Pal) 3ನೇ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. 23 ವರ್ಷ ವಯಸ್ಸಿನ ಪ್ರೀತಿ ಪಾಲ್ 14.21 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ 3ನೇ ಸ್ಥಾನ ಗಳಿಸಿದರು. ಇದು ಅವರ ವೈಯಕ್ತಿಕ ಶ್ರೇಷ್ಠ ಸಾಧನೆಯೂ ಆಗಿದೆ ಎಂದು ತಿಳಿದುಬಂದಿದೆ.
ಇನ್ನೂ ಸ್ಟೇಡ್ ಡಿ ಫ್ರಾನ್ಸ್‌ನಲ್ಲಿ ನಡೆದ ಮಹಿಳೆಯರ 100 ಮೀ-ಟಿ 35 ಫೈನಲ್‌ನಲ್ಲಿ ಪ್ರೀತಿ ಪಾಲ್ (Preethi Pal) 3ನೇ ಸ್ಥಾನ ಪಡೆದು ಕಂಚಿನ ಪದಕ ತಮ್ಮದಾಗಿಸಿಕೊಂಡಿದ್ದಾರೆ. 23 ವರ್ಷ ವಯಸ್ಸಿನ ಪ್ರೀತಿ ಪಾಲ್ 14.21 ಸೆಕೆಂಡುಗಳಲ್ಲಿ ಗುರಿ ತಲುಪುವ ಮೂಲಕ 3ನೇ ಸ್ಥಾನ ಗಳಿಸಿದರು. ಈ ಮೂಲಕ ತಮ್ಮ ವೈಯಕ್ತಿಕ ದಾಖಲೆಯನ್ನೂ ಮಾಡಿದರು.








