ADVERTISEMENT
Wednesday, August 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Sports

ಜಿಂಬಾಬ್ವೆ ವಿರುದ್ಧ ಸರಣಿ ಗೆದ್ದ ಭಾರತ

4-1ರ ಅಂತರದಿಂದ ಸರಣಿ ಗೆದ್ದ ಭಾರತ

Author2 by Author2
July 14, 2024
in Sports
Share on FacebookShare on TwitterShare on WhatsappShare on Telegram

ಹರಾರೆ: ಸಂಜು ಸ್ಯಾಮ್ಸನ್ (Sanju Samson) ಅವರ ಭರ್ಜರಿ ಬ್ಯಾಟಿಂಗ್ ಹಾಗೂ ಶಿವಂ ದುಬೆ ಆಲ್‌ ರೌಂಡ್‌ ಆಟದ ಪರಿಣಾಮ ಭಾರತ ತಂಡವು ಜಿಂಬಾಬ್ವೆ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಮುಕೇಶ್‌ ಕುಮಾರ್‌ ಮಾರಕ ಬೌಲಿಂಗ್‌ ದಾಳಿಗೆ ನಲುಗಿರುವ ಜಿಂಬಾಬ್ವೆ ವಿರುದ್ಧ ಟಿ20 ಸರಣಿಯ 5ನೇ ಪಂದ್ಯದಲ್ಲೂ 42 ರನ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯನ್ನು 4-1ರಲ್ಲಿ ಗೆಲುವು ಸಾಧಿಸಿದೆ.

Related posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

August 4, 2026
sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

August 4, 2026

ಆರಂಭಿಕ ಪಂದ್ಯದಲ್ಲಿ ಅತ್ಯಲ್ಪ ಮೊತ್ತವಿದ್ದರೂ ಅಚ್ಚರಿ ಎಂಬಂತೆ ಭಾರತ ತಂಡ ಸೋಲು ಕಂಡಿತ್ತು. ಆನಂತರ ಸತತ ನಾಲ್ಕೂ ಪಂದ್ಯಗಳನ್ನು ಭಾರತ ತಂಡ ಗೆದ್ದು ಬೀಗಿದೆ. ತನ್ನ ನಾಯಕತ್ವದಲ್ಲಿ ನಡೆದ ಮೊಟ್ಟ ಮೊದಲ ಅಂತಾರಾಷ್ಟ್ರೀಯ ಟಿ20 ಸರಣಿಯಲ್ಲೇ ಗೆಲುವು ಸಾಧಿಸುವ ಮೂಲಕ ಶುಭಮನ್‌ ಗಿಲ್‌ (Shubman Gill) ನಾಯಕತ್ವದ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ.

ಭಾನುವಾರ ನಡೆದ ಕೊನೆಯ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ತಂಡ 6 ವಿಕೆಟ್‌ ಕಳೆದುಕೊಂಡು 167 ರನ್‌ ಗಳಿಸಿತ್ತು. 168 ರನ್‌ ಸವಾಲಿನ ಗುರಿ ಬೆನ್ನಟ್ಟಿದ ಜಿಂಬಾಬ್ವೆ (Zimbabwe), ಭಾರತ ತಂಡದ ಮಾರಕ ಬೌಲಿಂಗ್ ಗೆ ತತ್ತರಿಸಿ 18.3 ಓವರ್‌ ಗಳಲ್ಲಿ 125 ರನ್‌ ಗಳಿಗೆ ಸರ್ವಪತನ ಕಂಡು ಸೋಲಿನ ರುಚಿ ಅನುಭವಿಸಿತು.

ಮೊದಲ ಐದು ಓವರ್‌ಗಳಲ್ಲೇ 40 ರನ್‌ಗಳಿಗೆ ಪ್ರಮುಖ ಮೂರು ವಿಕೆಟ್‌ ಕಳೆದುಕೊಂಡಿತ್ತು. ಈ ವೇಳೆ ಕ್ರೀಸ್‌ನಲ್ಲಿ ಭದ್ರವಾಗಿ ಕ್ರೀಸ್‌ನಲ್ಲಿ ನೆಲೆಯೂರಿದ ಸಂಜು ಸ್ಯಾಮ್ಸನ್‌ ಹಾಗೂ ರಿಯಾನ್‌ ಪರಾಗ್‌ ಜೋಡಿ ಉತ್ತಮ ಇನ್ನಿಂಗ್ಸ್‌ ಕಟ್ಟುವಲ್ಲಿ ಯಶಸ್ವಿಯಾಯಿತು. 56 ಎಸೆತಗಳಲ್ಲಿ ಈ ಜೋಡಿ 4ನೇ ವಿಕೆಟ್‌ ಗೆ 65 ರನ್‌ ಗಳಿಸಿತ್ತು. ಈ ವೇಳೆ ಸಿಕ್ಸರ್‌ ಬಾರಿಸಲು ಮುಂದಾದ ರಿಯಾನ್‌ ಪರಾಗ್‌ ಕ್ಯಾಚ್‌ ನೀಡಿ ಔಟಾದರು. ಆಗ ಕ್ರೀಸ್‌ಗಿಳಿದ ಶಿವಂ ದುಬೆ (Shivam Dube) ಆರಂಭದಿಂದಲೇ ಸಿಕ್ಸರ್‌, ಬೌಂಡರಿ ಅಬ್ಬರಿಸಲು ಶುರು ಮಾಡಿದರು. ಇದರಿಂದ ಭಾರತ ತಂಡ 160 ರನ್‌ ಗಳ ಗಡಿ ದಾಟಿತು.

ಸಂಜು ಸ್ಯಾಮ್ಸನ್‌ 45 ಎಸೆತಗಳಲ್ಲಿ 1 ಬೌಂಡರಿ ಹಾಗೂ 4 ಭರ್ಜರಿ ಸಿಕ್ಸರ್‌ನೊಂದಿಗೆ 58 ರನ್‌ ಚಚ್ಚಿದರು. ಈ ವೇಳೆ ಸಂಜು ಸ್ಯಾಮ್ಸನ್‌ ಬಾರಿಸಿದ ಸಿಕ್ಸರ್‌ವೊಂದು 110 ಮೀಟರ್‌ ಸಾಗಿತು. ಶಿವಂ ದುಬೆ 28 ರನ್‌ (12 ಎಸೆತ, 2 ಸಿಕ್ಸರ್‌, 2 ಬೌಂಡರಿ), ರಿಯಾನ್‌ ಪರಾಗ್‌ 22 ರನ್‌, ಯಶಸ್ವಿ ಜೈಸ್ವಾಲ್‌ 12 ರನ್‌, ಶುಭಮನ್‌ ಗಿಲ್‌ 13 ರನ್‌, ಅಭಿಷೇಕ್‌ ಶರ್ಮಾ 14 ರನ್‌, ರಿಂಕು ಸಿಂಗ್‌ 11 ರನ್‌, ವಾಷಿಂಗ್ಟನ್‌ 10 ರನ್‌ ಗಳಿಸಿದರು.

ಗುರಿ ಬೆನ್ನಟ್ಟಿದ ಜಿಂಬಾಬ್ವೆ 15 ರನ್ಗೆ 2 ವಿಕೆಟ್ ಕಳೆದುಕೊಂಡು ಆತಂಕಕ್ಕೆ ಸಿಲುಕಿತ್ತು. ಡಿಯೋನ್ ಮೈರ್ಸ್ 34 ರನ್ ಗಳಿಸಿ ತಂಡಕ್ಕೆ ಆಧಾರವಾದರು. ಕೊನೆಯಲ್ಲಿ ಫರಾಜ್ ಅಕ್ರಮ್ 27 ರನ್ ಗಳಿಸಿದರು. ಮರುಮಣಿ 27 ರನ್ ಗಳಿಸಿದರು. ನಂತರ ಯಾರೂ ಸರಿಯಾಗ ಆಡಲಿಲ್ಲ. ಹೀಗಾಗಿ ತಂಡ ಸೋಲನ್ನು ಒಪ್ಪಿಕೊಂಡಿತು. ಭಾರತ ಪರ ಮುಕೇಶ್ ಕುಮಾರ್ 4, ಶಿವಂ ದುಬೆ 2, ತುಷಾರ್‌ ದೇಶ್‌ಪಾಂಡೆ, ವಾಷಿಂಗ್ಟನ್‌ ಸುಂದರ್‌, ಅಭಿಷೇಕ್‌ ಶರ್ಮಾ ತಲಾ ಒಂದೊಂದು ವಿಕೆಟ್‌ ಪಡೆದು ಮಿಂಚಿದರು.

Tags: Cricket
ShareTweetSendShare
Join us on:

Related Posts

sports/rishabh-pant-meets-ms-dhoni-ahead-of-sri-lanka-test-

ಭಾರತದ ಲಂಕಾ ಪ್ರವಾಸ – ಧೋನಿಯ ಮಾರ್ಗದರ್ಶನ ಪಡೆದ ರಿಷಪ್ ಪಂತ್..!

by admin
August 4, 2026
0

ಫಿಯರ್‍ಲೆಸ್ ಕ್ರಿಕೆಟರ್ ರಿಷಬ್ ಪಂತ್ ಶ್ರೀಲಂಕಾ ಪ್ರವಾಸಕ್ಕೆ ರೆಡಿಯಾಗುತ್ತಿದ್ದಾರೆ. ಅಪಘಾತ, ಸತತ ಗಾಯ, ಸ್ಥಿರ ಪ್ರದರ್ಶನದ ಕೊರತೆಯ ನಡುವೆಯೂ ಪಂತ್ ಟೀಮ್ ಇಂಡಿಯಾದ ಟೆಸ್ಟ್ ತಂಡದ ಆಧಾರಸ್ತಂಭವಾಗಿದ್ದಾರೆ....

sports/ms-dhoni-rides-ktm-390-duke-in-chennai-

ಚೆನ್ನೈನಲ್ಲಿ ಹೈಸ್ಪೀಡ್ ಕೆಟಿಎಂ ಬೈಕ್ ಸವಾರಿ ಮಾಡಿದ ಧೋನಿ

by admin
August 4, 2026
0

ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು, ಮದ್ರಾಸ್ ಇಂಟರ್ ನ್ಯಾಷನಲ್ ಸಕ್ರ್ಯೂಟ್‍ನಲ್ಲಿ ಕೆಟಿಎಂ 390 ಡ್ಯೂಕ್ ಬೈಕ್ ಸವಾರಿ ಮಾಡುವ ಮೂಲಕ ಗಮನ...

auqib-nabi-life-story-kannada

Teamindia- ಹಿಮದ ನಾಡಿನ ಐಸ್‍ಮೆನ್..ಟೀಮ್ ಇಂಡಿಯಾದ  ಹೊಸ ಸ್ಪೀಡ್ ಗನ್. ಅವನ ಹೆಸರು..!

by admin
August 4, 2026
0

ಅವನು ಗುರಿ ಹೊಡೆಯುವ ಸ್ನೈಪರ್. ಬುಲೆಟ್ ವೇಗದಲ್ಲಿ ಬೌಲಿಂಗ್ ಮಾಡುವ ಸ್ಟ್ರೈಕರ್. ನಿರಂತರವಾಗಿ ಬೌಲ್ ಮಾಡುವ ಬೌಲಿಂಗ್ ಮೆಷಿನ್. ದಣಿವರಿಯದ ಐರಾನ್ ಮ್ಯಾನ್. ವಿಕೆಟ್ ಪಡೆಯುವ ಹಂಟರ್,...

jasprit-bumrah-ruled-out-sri-lanka-test-series-auqib-nabi-included

Team india- ಲಂಕಾ ಟೆಸ್ಟ್ ಸರಣಿಯಿಂದ ಬೂಮ್ರಾ ಔಟ್.. ಔಕಿಬ್ ನಬಿ ಇನ್..! 

by admin
August 3, 2026
0

  ಟೀಮ್ ಇಂಡಿಯಾದ ಟ್ರಂಪ್ ಕಾರ್ಡ್  ಬೌಲರ್ ಮತ್ತೆ ಗಾಯದಿಂದ ಬಳುತ್ತಿದ್ದಾರೆ. ಮೊಣಕಾಲಿನ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ವೇಗಿ ಮುಂಬರುವ ಲಂಕಾ ವಿರುದ್ಧದ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ....

glasgow-commonwealth-games-2026-india-medals-nita-ambani-congratulates

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಅಮೋಘ ಸಾಧನೆಗೆ ನೀತಾ ಅಂಬಾನಿ ಅಭಿನಂದನೆ

by admin
August 3, 2026
0

  ಮುಂಬೈ, ಆಗಸ್ಟ್ 03, 2026: ಗ್ಲಾಸ್ಗೋ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಕ್ರೀಡಾಪಟುಗಳು 13 ಚಿನ್ನ, 17 ಬೆಳ್ಳಿ ಹಾಗೂ 9 ಕಂಚಿನ ಪದಕಗಳ ಸಹಿತ ಒಟ್ಟು...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram