RSS ಇರದೇ ಇದ್ದಿದ್ರೆ ಭಾರತ ಮೂರ್ನಾಲ್ಕು ಪಾಕಿಸ್ತಾನವಾಗುತ್ತಿತ್ತು – ಜಗದೀಶ್ ಶೆಟ್ಟರ್
ಹುಬ್ಬಳ್ಳಿ : RSS ಇರದೇ ಇದ್ದಿದ್ರೆ ಇಷ್ಟೊತ್ತಿಗೆ ಭಾರತ ಮೂರ್ನಾಲ್ಕು ಪಾಕಿಸ್ತಾನವಾಗುತ್ತಿತ್ತು ಎಂದು ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. ಅಲ್ಲದೇ ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ವಿರುದ್ಧವೂ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಜಗದೀಶ್ ಶೆಟ್ಟರ್ ಅವರು, ಸಿದ್ದರಾಮಯ್ಯ , ಕುಮಾರಸ್ವಾಮಿ ಅವರು ಕೇವಲ ಮತಬ್ಯಾಂಕ್ ಗಾಗಿ RSS ವಿರುದ್ಧ ಪೋಟಿಯಂತೆ ಟೀಕೆಗಳನ್ನ ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘ ಇಲ್ಲದಿದ್ದರೆ ಈ ವೇಳೆಗೆ ಭಾರತ ಮೂರ್ನಾಲ್ಕು ಪಾಕಿಸ್ಥಾನ ಆಗುತ್ತಿತ್ತು. ದೇಶಪ್ರೇಮ ಸಂಘಟನೆ ಬಗ್ಗೆ ಇಲ್ಲಸಲ್ಲದ ಟೀಕೆ ಮೂಲಕ ಇಬ್ಬರು ತಮ್ಮ ವ್ಯಕ್ತಿತ್ವಕ್ಕೆ ಧಕ್ಕೆ ತಂದುಕೊಳುತ್ತಿದ್ದಾರೆ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿಗಳಿಬ್ಬರೂ ಕೂಡ , ಆರ್‌ಎಸ್‌ಎಸ್ ಟೀಕಿಸಿದರೆ ಮುಸ್ಲಿಂ ಮತದಾರರು ತಮ್ಮ ಪರವಾಗುತ್ತಾರೆಂಬ ಭ್ರಮೆಯಲ್ಲಿದ್ದಾರೆ. ಮುಸ್ಲಿಮರಿಗೂ ಇವರ ಬಂಡವಾಳ ಗೊತ್ತಾಗಿದ್ದು, ಅನೇಕರು ಬಿಜೆಪಿ ಸೇರಿದ್ದಾರೆ. ಸಂಘ ಕಾರ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದಿದ್ದಾರೆ.
ಇನ್ನೂ ಇದೇ ವೇಳೆ ಸಂಘ (RSS) – ಬಿಜೆಪಿ ಒಂದೇ ನಾವು ಸಂಘ ಮೂಲದಿಂದ ಬಂದವರು. ಇಂದಿಗೂ ಸಂಘ ಕಾರ್ಯಕರ್ತರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತವೆ. ಇದರಲ್ಲಿ ಯಾವುದೇ ಹಿಂಜರಿಕೆ ಇಲ್ಲ.
RSS ಇದ್ದ ಕಾರಣಕ್ಕೆ ದೇಶದಲ್ಲಿ ಸುರಕ್ಷತೆ, ಜನರಿಗೆ ಗೌರವ ಇದೆ. ಮತಬ್ಯಾಂಕ್ ಗಾಗಿ RSS ಬಗ್ಗೆ ಕೀಳಾಗಿ ಮಾತನಾಡುವುದನ್ನು ಸಿದ್ದರಾಮಯ್ಯ, ಕುಮಾರಸ್ವಾಮಿ ನಿಲ್ಲಿಸಬೇಕು ಎಂದು ಶೆಟ್ಟರ್ ತಿಳಿಸಿದ್ದಾರೆ.








