indian army
ಶ್ರೀನಗರ : ಗಡಿ ನಿಯಂತ್ರಣ ರೇಖೆಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿದ್ದು, ಘಟನೆ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಅಲ್ಲದೇ ಶೆಲ್ ದಾಳಿಯಲ್ಲಿ ಮೂವರು ನಾಗರೀಕರು ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಾಜಿ ಪೀರ್ ಸೆಕ್ಟರ್ ನಲ್ಲಿ ಗಡಿ ಭದ್ರತಾ ಪಡೆಯ ಸಬ್ ಇನ್ಸ್ ಪೆಕ್ಟರ್ ಒಬ್ಬರು ಮೃತಪಟ್ಟಿದ್ದು, ಓರ್ವ ಯೋಧ ಗಾಯಗೊಂಡಿದ್ದಾರೆ ಎಂಬುದು ತಿಳಿದುಬಂದಿದೆ. ಇನ್ನೂ ಉರಿಯ ನಮ್ಬ್ಲಾ ಸೆಕ್ಟರ್ ನಲ್ಲಿ ಸೈನಿಕರು ಹುತಾತ್ಮರಾಗಿದ್ದು, ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಕಮಲ್ ಕೋಟ್ ಸೆಕ್ಟರ್ ನಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದಾರೆ.
ಬಾರಾಮುಲ್ಲಾ ಜಿಲ್ಲೆಯ ಉರಿ ಪ್ರದೇಶದ ಕಮಲ್ ಕೋಟ್ ಸೆಕ್ಟರ್ ನಲ್ಲಿ ಇಬ್ಬರು ನಾಗರಿಕರು ಮೃತಪಟ್ಟಿದ್ದು, ಉರಿಯ ಹಾಜಿ ಪೀರ್ ಸೆಕ್ಟರ್ ನ ಬಾಲ್ ಕೋಟ್ ಪ್ರದೇಶದಲ್ಲಿ ಮಹಿಳೆ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಭಾರತೀಯ ಪಡೆಗಳು ಶೆಲ್ ದಾಳಿಗೆ ಪ್ರತಿದಾಳಿ ನಡೆಸಿದ್ದು, ಪಾಕ್ ಕಡೆಯಿಂದ ಹಲವು ಸಾವುನೋವುಗಳು ಸಂಭವಿಸಿವೆ ಎಂದು ಸೇನಾ ಮೂಲಗಳು ತಿಳಿಸಿವೆ.
ಪಾಕಿಸ್ತಾನದ ಶೆಲ್ ದಾಳಿಯಲ್ಲಿ ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಿರಾ ಬಳಿಕ ಬಸವಕಲ್ಯಾಣ ಗೆಲ್ಲಲು ಬಿಜೆಪಿ ಟಾಸ್ಕ್; ಬಿ.ವೈ ವಿಜಯೇಂದ್ರ ಹೇಳಿದ್ದೇನು ಗೊತ್ತಾ..!
indian army
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel