ಗಡಿಯಲ್ಲಿ ಸೇನೆ ಉಗ್ರರ ನಡುವೆ ಗುಂಡಿನ ಚಕಮಕಿ – ಐವರು ಯೋಧರು ಹುತಾತ್ಮ
ಕಣಿವೆನಾಡು ಜಮ್ಮುಕಾಶ್ಮೀರದ ಪೂಂಚ್ ಭಾಗದಲ್ಲಿ ಭಾರತೀಯ ಸೈನಿಕರು ಮತ್ತು ಉಗ್ರರು ನಡುವೆ ಸಂಘರ್ಷ ನಡೆದಿದೆ. ಇಬ್ಬರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ಒಬ್ಬ ಸೇನಾ ಅಧಿಕಾರಿ ಮತ್ತು ನಾಲ್ವರು ಸೈನಿಕರು ಮೃತಪಟ್ಟಿದ್ದಾರೆ ಎಂದು ಸೇನೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉಗ್ರರ ಒಳನುಸುಳುವಿಕೆ ತಡೆಯುವ ಕಾರ್ಯಾಚರಣೆ ವೇಳೆ ಈ ದುರ್ಘಟನೆ ನಡೆದಿದೆ.